ADVERTISEMENT

ಕನ್ನಡ ಸಾಹಿತ್ಯ ರಥಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2014, 19:50 IST
Last Updated 23 ನವೆಂಬರ್ 2014, 19:50 IST
ನೆಲಮಂಗಲ ಕನ್ನಡ ಗೆಳೆಯರ ಬಳಗ ಪಟ್ಟಣದ ಕೋಟೆ ಬೀದಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಕನ್ನಡ ಸಾಹಿತ್ಯ ಸಾರಸ್ವತ ರಥ’ಕ್ಕೆ ನಿವೃತ್ತ ತಾಲ್ಲೂಕು ವೈದ್ಯಾಧಿಕಾರಿ ಡಾ.ಜಿ.ಎ.ವೆಂಕಟೇಶಲು ಚಾಲನೆ ನೀಡಿದರು. ಬಳಗದ ಉಪಾಧ್ಯಕ್ಷ ರಾಮಮೂರ್ತಿ, ವಿಜಯೇಂದ್ರರಾವ್‌, ಲಯನ್ಸ್‌ ಸಂಸ್ಥೆ ಮಾಜಿ ಅಧ್ಯಕ್ಷ ಬಿ.ಸುರೇಶ್‌ ಆಳ್ವ ಇದ್ದಾರೆ

ನೆಲಮಂಗಲ: ‘ಸಾಹಿತ್ಯದ ಬಗೆಗಿನ ಆಸಕ್ತಿ ಕಡಿಮೆಯಾಗುತ್ತಿರುವ ಪ್ರಸ್ತುತ ದಿನಗಳಲ್ಲಿ ಕನ್ನಡ ಸಾಹಿತ್ಯ, ಸಂಸ್ಕೃತಿಯನ್ನು ಮನೆ ಮನೆಗಳಿಗೆ ತಲುಪಿಸುತ್ತಿರುವ ಕನ್ನಡ ಗೆಳೆಯರ ಬಳಗದ ಕಾರ್ಯ ಶ್ಲಾಘನೀಯ’ ಎಂದು ನಿವೃತ್ತ ತಾಲ್ಲೂಕು ವೈದ್ಯಾಧಿಕಾರಿ ಡಾ.ಜಿ.ಎ.ವೆಂಕಟೇಶಲು ತಿಳಿಸಿದರು.

ಸ್ಥಳೀಯ ಕನ್ನಡ ಗೆಳೆಯರ ಬಳಗ ಪಟ್ಟಣದ ಕೋಟೆ ಬೀದಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಸಾರಸ್ವತ ರಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಗೆಳೆಯರ ಬಳಗದ ಅಧ್ಯಕ್ಷ ಕೆ. ನರಸಿಂಹಮೂರ್ತಿ ಮಾತನಾಡಿ, ‘ಕನ್ನಡ ಸಾಹಿತ್ಯ ಸಾರಸ್ವತ ರಥದಲ್ಲಿ ಕನ್ನಡದ ಸಾಹಿತ್ಯ, ಕಥೆ, ಕಾದಂಬರಿ, ಕವನ ಸಂಕಲನಗಳು ಇದ್ದು ಪಟ್ಟಣದ ಎಲ್ಲ ವಾರ್ಡುಗಳಿಗೂ ಸಂಚರಿಸಿ ಪುಸ್ತಕ ಪ್ರದರ್ಶನ ಮತ್ತು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.