ADVERTISEMENT

ಕಾಂಗ್ರೆಸ್‌ ಜತೆ ಮೈತ್ರಿ ಇಲ್ಲ: ಜೆಡಿಎಸ್‌ ಅಭ್ಯರ್ಥಿ

​ಪ್ರಜಾವಾಣಿ ವಾರ್ತೆ
Published 27 ಮೇ 2018, 19:53 IST
Last Updated 27 ಮೇ 2018, 19:53 IST
ಕಾಳೇಗೌಡ ಅವರು ಜೆ.ಪಿ. ನಗರದ ಸಾರಕ್ಕಿ ವಾರ್ಡ್‌ನಲ್ಲಿ ಭಾನುವಾರ ಮತಯಾಚಿಸಿದರು
ಕಾಳೇಗೌಡ ಅವರು ಜೆ.ಪಿ. ನಗರದ ಸಾರಕ್ಕಿ ವಾರ್ಡ್‌ನಲ್ಲಿ ಭಾನುವಾರ ಮತಯಾಚಿಸಿದರು   

ಬೆಂಗಳೂರು: ಕೊಳಚೆ ಪ್ರದೇಶಗಳಲ್ಲಿ ಮನೆಗಳ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಮಾಡುವುದಾಗಿ ಜಯನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕಾಳೇಗೌಡ ಭರವಸೆ ನೀಡಿದರು.

ಭಾನುವಾರ ಜೆಪಿ ನಗರದ ಸಾರಕ್ಕಿ ವಾರ್ಡ್‌ನಲ್ಲಿ ಮತಯಾಚನೆ ಮಾಡಿ ಅವರು ಮಾತನಾಡಿದರು.

‘ಈ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಕುಂಠಿತಗೊಂಡಿವೆ. ಈ ಬಾರಿ ತಮಗೆ ಒಂದು ಅವಕಾಶ ಮಾಡಿಕೊಡಬೇಕು. ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿರುವುದರಿಂದ ಕ್ಷೇತ್ರದಲ್ಲಿ ಅತಿ ಹೆಚ್ಚಿನ ಅನುದಾನ ಸಿಗಲಿದೆ' ಎಂದರು.

ADVERTISEMENT

‘ಈ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ರೀತಿಯ ಮೈತ್ರಿ ಆಗಿಲ್ಲ. ಸ್ವತಂತ್ರವಾಗಿ ಜೆಡಿಎಸ್ ಚುನಾವಣೆಯನ್ನು ಎದುರಿಸಲಿದೆ. ಪಕ್ಷದ ವರಿಷ್ಠ ಎಚ್‌.ಡಿ.ದೇವೇಗೌಡ, ಕುಮಾರಸ್ವಾಮಿ ನೇತೃತ್ವದಲ್ಲಿ ರ‍್ಯಾಲಿ ಹಾಗೂ ಪ್ರಚಾರ ಕೈಗೊಳ್ಳಲಾಗುವುದು. ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡಿ ಜನರ ಮೆಚ್ಚುಗೆಗೆ ಪಾತ್ರರಾಗುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.