ADVERTISEMENT

‘ಕಾರ್ಮಿಕರ ಹಣ ರೈತರಿಗೆ ನೀಡಬೇಡಿ’

​ಪ್ರಜಾವಾಣಿ ವಾರ್ತೆ
Published 20 ಜುಲೈ 2017, 19:49 IST
Last Updated 20 ಜುಲೈ 2017, 19:49 IST

ಬೆಂಗಳೂರು: ‘ರಾಜ್ಯದ ಕಟ್ಟಡ ಕಾರ್ಮಿಕರ ಕ್ಷೇಮಾಭಿವೃದ್ಧಿಗಾಗಿ ಸಂಗ್ರಹಿಸಲಾದ ಹಣವನ್ನು ರೈತರ ಸಾಲ ಮನ್ನಾ ಮಾಡಲು ಬಳಸಬಾರದು’ ಎಂದು ರಾಜ್ಯ ಕಟ್ಟಡ ಕಾರ್ಮಿಕರ ಒಕ್ಕೂಟದ ಅಧ್ಯಕ್ಷ ಎನ್.ಪಿ.ಸಾಮಿ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು,‘ರಾಜ್ಯದ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 11.42 ಲಕ್ಷ ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದಾರೆ. ನೋಂದಣಿ ಶುಲ್ಕ, ನವೀಕರಣ ವಂತಿಗೆ, ಹಾಗೂ ಸೆಸ್‌, ವಾರ್ಷಿಕ ಬ್ಯಾಂಕ್‌ ಬಡ್ಡಿ ರೂಪದಲ್ಲಿ ₹ 5,835 ಕೋಟಿ ಸಂಗ್ರಹವಾಗಿದೆ. ಈ ಮೊತ್ತದಿಂದ ರೈತರ ಸಾಲ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಇದನ್ನು ವಿರೋಧಿಸುತ್ತೇವೆ’ ಎಂದರು.

‘ಕಾಯ್ದೆ ಪ್ರಕಾರ, ಮಂಡಳಿಯಲ್ಲಿ ಸಂಗ್ರಹವಾದ ಹಣವನ್ನು ಕಟ್ಟಡ ಕಾರ್ಮಿಕರ ಕಲ್ಯಾಣಕ್ಕೆ ಬಳಸಬೇಕು ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.