ADVERTISEMENT

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2016, 19:46 IST
Last Updated 3 ಡಿಸೆಂಬರ್ 2016, 19:46 IST

ಬೆಂಗಳೂರು: ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ವ್ಯಕ್ತಿ, ಸಂಸ್ಥೆಗಳು ಮತ್ತು ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಮಹಿಳೆಯರಿಗೆ ವಾರ್ಷಿಕವಾಗಿ ನೀಡಲಾಗುವ ‘ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ’ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅರ್ಜಿ ಆಹ್ವಾನಿಸಿದೆ.

2016–17ನೇ ಸಾಲಿನ ಪ್ರಶಸ್ತಿ ಇದಾಗಿದ್ದು, ಇಲಾಖೆಯು ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಮಾತ್ರ ಪ್ರಶಸ್ತಿ ನೀಡಲಿದೆ. ಹಾಗಾಗಿ, ಈ ಜಿಲ್ಲೆಯ ವ್ಯಾಪ್ತಿಯಲ್ಲಿರುವವರು ಸಲ್ಲಿಸುವ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುವುದು ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಡಿಸೆಂಬರ್‌ 15.

ಹೆಚ್ಚಿನ ಮಾಹಿತಿಗೆ: ಉಪನಿರ್ದೇಶಕರು, ಮಹಿಳಾ ಮತ್ತು ಕಲ್ಯಾಣ ಅಭಿವೃದ್ಧಿ ಇಲಾಖೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಕಿದ್ವಾಯಿ ಆಸ್ಪತ್ರೆ ಬಳಿ,
ಡಾ. ಎಂ.ಎಚ್‌. ಮರಿಗೌಡ ರಸ್ತೆ, ಬೆಂಗಳೂರು–560029. ದೂರವಾಣಿ ಸಂಖ್ಯೆ–080–26578688

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.