ADVERTISEMENT

ಕೆಂಪಣ್ಣ ಆಯೋಗ: ಜೂನ್‌ 18ರಿಂದ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 3 ಜೂನ್ 2015, 20:26 IST
Last Updated 3 ಜೂನ್ 2015, 20:26 IST

ಬೆಂಗಳೂರು: ಅರ್ಕಾವತಿ ಬಡಾವಣೆ ನಿರ್ಮಾಣಕ್ಕೆ ಸ್ವಾಧೀನ ಮಾಡಿದ್ದ ಜಮೀನನ್ನು ಅಕ್ರಮವಾಗಿ ಡಿನೋಟಿಫೈ ಮಾಡಲಾಗಿದೆ ಎಂಬ ಆರೋಪದ ಸತ್ಯಾಸತ್ಯತೆ ಕುರಿತು ವರದಿ ನೀಡಲು ರಚನೆಯಾಗಿರುವ ನ್ಯಾಯಮೂರ್ತಿ ಎಚ್‌.ಎಸ್‌. ಕೆಂಪಣ್ಣ ಆಯೋಗ ಜೂನ್‌ 18ರಿಂದ ವಿಚಾರಣೆ ಆರಂಭಿಸಲಿದೆ.

ಹಗರಣಕ್ಕೆ ಸಂಬಂಧಿಸಿದಂತೆ ಒಟ್ಟು 84 ದೂರುಗಳು ಆಯೋಗಕ್ಕೆ ಸಲ್ಲಿಕೆಯಾಗಿವೆ. ಆದರೆ ಪೂರಕ ದಾಖಲೆಗಳು ಇಲ್ಲದ ಕಾರಣ ಒಟ್ಟು ಎಂಟು ದೂರುಗಳನ್ನು ತಿರಸ್ಕರಿಸಲಾಗಿದೆ. ಹಾಗಾಗಿ 76 ದೂರುಗಳಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಯಲಿದೆ. ಹೊಸ ದೂರುಗಳ ಸ್ವೀಕಾರವನ್ನು ನಿಲ್ಲಿಸಲಾಗಿದೆ ಎಂದು ಗೊತ್ತಾಗಿದೆ. ಅರ್ಕಾವತಿ ಹಗರಣ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ ಒತ್ತಾಯಿಸಿದ್ದವು. ಆದರೆ ಇದಕ್ಕೆ ಮಣಿಯದ ಸರ್ಕಾರ, ನ್ಯಾಯಮೂರ್ತಿ ಕೆಂಪಣ್ಣ ಅವರ ನೇತೃತ್ವದಲ್ಲಿ ಆಯೋಗವನ್ನು ರಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.