ADVERTISEMENT

ಕೆರೆ ರಕ್ಷಣೆಗೆ ಕ್ರಮ ಕೈಗೊಳńಲಿ

​ಪ್ರಜಾವಾಣಿ ವಾರ್ತೆ
Published 2 ಮೇ 2016, 20:06 IST
Last Updated 2 ಮೇ 2016, 20:06 IST

ಬೆಂಗಳೂರು: ‘ಕೆರೆಗಳ ಸಂರಕ್ಷಣೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು ಹಾಗೂ ಕೆರೆಗಳನ್ನು ಸಂರಕ್ಷಿಸಲು ಸರ್ಕಾರ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಜನಚೇತನ ಟ್ರಸ್ಟ್  ಅಧ್ಯಕ್ಷ ಪ್ರಸನ್ನ ಎನ್.ಗೌಡ  ಒತ್ತಾಯಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಮ್ಮ ಟ್ರಸ್ಟ್ ವತಿಯಿಂದ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ  400 ಕ್ಕೂ ಹೆಚ್ಚು ಹಳ್ಳಿಗಳಲ್ಲಿ ‘ಕೆರೆ–ಕಟ್ಟೆ ಉಳಿಸಿ’ ಎಂಬ ಕೆರೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಸಲಾಗಿದೆ’ ಎಂದು  ಅವರು ತಿಳಿಸಿದರು.

‘ರಾಜ್ಯದಲ್ಲಿ ಕೆರೆ ಅಭಿವೃದ್ಧಿ ಪ್ರಾಧಿಕಾರವು ನಿಷ್ಕ್ರಿಯವಾಗಿದೆ. ಅದು  ಸಕ್ರಿಯವಾಗಿ ಕೆಲಸ ಮಾಡುವಂತೆ ಮಾಡಬೇಕು. ಪ್ರಾಧಿಕಾರಕ್ಕೆ ಶಾಸನ ಬದ್ಧ ಅಧಿಕಾರವನ್ನು ನೀಡಬೇಕು’ ಎಂದು ಒತ್ತಾಯಿಸಿದರು.

‘ಸಣ್ಣ ಮತ್ತು ಬೃಹತ್‌ ನೀರಾವರಿ ಇಲಾಖೆ, ಕಾರ್ಪೋರೇಷನ್, ಜಿಲ್ಲಾ ಪಂಚಾಯ್ತಿ, ಗ್ರಾಮ ಪಂಚಾಯ್ತಿ ಅಡಿಯಲ್ಲಿ ಕೆರೆಗಳ ನಿರ್ವಹಣೆ ಹಂಚಿಕೆಯಾಗಿದೆ, ಹಾಗಾಗಿ  ಸಮಗ್ರ ಕೆರೆ ಅಭಿವೃದ್ಧಿ ಆಗುತ್ತಿಲ್ಲ. ಇವುಗಳೆಲ್ಲವನ್ನು ಕೆರೆ ಅಭಿವೃದ್ಧಿ ಪ್ರಾಧಿಕಾರದಡಿಯಲ್ಲಿ ತರಬೇಕು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.