ADVERTISEMENT

ಕೆಳಸೇತುವೆ ಕಾಮಗಾರಿ ವಿಳಂಬ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2017, 19:38 IST
Last Updated 19 ನವೆಂಬರ್ 2017, 19:38 IST
ಎಚ್‌.ಡಿ.ದೇವೇಗೌಡ ಮಾತನಾಡಿದರು. ಜೆಡಿಎಸ್‌ ಮುಖಂಡರಾದ ಟಿ.ಜಿ.ಚಂದ್ರು, ಎನ್‌.ವೇಣುಗೋಪಾಲ್‌, ಹರೀಶ್‌ಕುಮಾರ್‌ ಇದ್ದಾರೆ.
ಎಚ್‌.ಡಿ.ದೇವೇಗೌಡ ಮಾತನಾಡಿದರು. ಜೆಡಿಎಸ್‌ ಮುಖಂಡರಾದ ಟಿ.ಜಿ.ಚಂದ್ರು, ಎನ್‌.ವೇಣುಗೋಪಾಲ್‌, ಹರೀಶ್‌ಕುಮಾರ್‌ ಇದ್ದಾರೆ.   

ಬೆಂಗಳೂರು: ‘ಕೊಡಿಗೇಹಳ್ಳಿ ರೈಲ್ವೆಗೇಟ್‌ ಕೆಳಸೇತುವೆ ಕಾಮಗಾರಿ ನನೆಗುದಿಗೆ ಬಿದ್ದಿರುವುದರಿಂದ ಆ ಭಾಗದ ಜನರು ಪ್ರತಿನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಕಾಮಗಾರಿ ಪೂರ್ಣಗೊಳಿಸಲು ಒತ್ತಾಯಿಸಿ ಶೀಘ್ರದಲ್ಲೇ ಪ್ರತಿಭಟನೆ ನಡೆಸುತ್ತೇವೆ’ ಎಂದು ಜೆಡಿಎಸ್‌
ವರಿಷ್ಠ ಎಚ್‌.ಡಿ. ದೇವೇಗೌಡ ಎಚ್ಚರಿಸಿದರು.

ಕೊಡಿಗೇಹಳ್ಳಿ ಗೇಟ್‌ ಸಮೀಪದಲ್ಲಿ ಬ್ಯಾಟರಾಯನಪುರ ಕ್ಷೇತ್ರದ ಜೆಡಿಎಸ್‌ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ರಾಷ್ಟ್ರೀಯ ಪಕ್ಷಗಳ ಆಡಳಿತದಿಂದ ಅನುಭವಿಸಿರುವ ನೋವುಗಳಿಂದ ಮುಕ್ತಿ ಸಿಗಲು ಮತ್ತು ನಮ್ಮ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವ ಶಕ್ತಿ ಪ್ರಾದೇಶಿಕ ಪಕ್ಷಕ್ಕೆ ಮಾತ್ರ ಇದೆ. ಇದನ್ನು ಜನರು ಅರ್ಥ ಮಾಡಿಕೊಳ್ಳಬೇಕು’ ಎಂದರು.

ADVERTISEMENT

ಪಕ್ಷದ ಮುಖಂಡ ಪಿ.ಜಿ.ಆರ್‌ ಸಿಂಧ್ಯ ಮಾತನಾಡಿ, ‘ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಜನಪರ ಆಡಳಿತವನ್ನು ಜನರು ನಿರೀಕ್ಷಿಸುತ್ತಿದ್ದಾರೆ. ಹೀಗಾಗಿ ನಮ್ಮ ಪಕ್ಷಕ್ಕೆ ಮತ ಚಲಾಯಿಸಬೇಕು’ ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.