ADVERTISEMENT

ಕೇಂಬ್ರಿಜ್ಡ್ ಶಾಲೆ ವಿರುದ್ಧ ಭುಗಿಲೆದ್ದ ಪ್ರತಿಭಟನೆ

1ನೇ ತರಗತಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2014, 10:33 IST
Last Updated 31 ಅಕ್ಟೋಬರ್ 2014, 10:33 IST
ಕೇಂಬ್ರಿಜ್ಡ್ ಶಾಲೆ ವಿರುದ್ಧ ಭುಗಿಲೆದ್ದ ಪ್ರತಿಭಟನೆ
ಕೇಂಬ್ರಿಜ್ಡ್ ಶಾಲೆ ವಿರುದ್ಧ ಭುಗಿಲೆದ್ದ ಪ್ರತಿಭಟನೆ   

ಬೆಂಗಳೂರು(ಐಎಎನ್‌ಎಸ್‌): ತಿಪ್ಪಸಂದ್ರದ ‘ದಿ ಇಂದಿರಾನಗರ್‌ ಕೇಂಬ್ರಿಜ್ಡ್ ಇಂಗ್ಲೀಷ್‌ ಶಾಲೆ’ಯ ವಿದ್ಯಾರ್ಥಿನಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಖಂಡಿಸಿ ಪೋಷಕರು  ಮತ್ತು ನೂರಾರು ಸಾಮಾಜಿಕ ಕಾರ್ಯಕರ್ತರು ಶುಕ್ರವಾರ ಇಲ್ಲಿ ಭಾರಿ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.

ಶಾಲೆಯಲ್ಲಿ ನಾಲ್ಕು ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ. ಆದರೆ, ಇವುಗಳಲ್ಲಿ  ಒಂದು ಮಾತ್ರ ಕಾರ್ಯನಿರ್ವಹಿಸುತ್ತಿದೆ ಎಂದು ಪೋಷಕರೊಬ್ಬರು ಆರೋಪಿಸಿದ್ದಾರೆ.

‘ಆರೋಪಿಯನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ನಂತರ ವಿಚಾರಣೆಗಾಗಿ ವಶಕ್ಕೆ ಪಡೆಯುತ್ತೇವೆ. ಬಾಲಕಿಯ ವೈದ್ಯಕೀಯ ಪರೀಕ್ಷೆ ವರದಿಗಾಗಿ  ಕಾಯುತ್ತಿದ್ದೇವೆ’ ಎಂದು ಹೆಚ್ಚುವರಿ ಪೊಲೀಸ್‌ ಆಯುಕ್ತ ಅಲೋಕ್‌ ಕುಮಾರ್‌ ವರದಿಗಾರರಿಗೆ ತಿಳಿಸಿದರು.

ಪೊಸ್ಕೋ ಕಾಯ್ದೆಯಡಿ ಆರೋಪಿ ವಿರುದ್ಧ ಕ್ರಿಮಿನಲ್‌ ದೂರು ದಾಖಲಿಸಲಾಗಿದೆ. ಬಾಲಕಿಯ ಹೇಳಿಕೆ ಆಧರಿಸಿ ಐಪಿಸಿ 376ನೇ ಕಲಂನಡಿ  ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT