ಬೆಂಗಳೂರು: ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ನಿರಾಕರಿಸಿದ್ದ ಏಕಸದಸ್ಯ ಪೀಠದ ಕ್ರಮವನ್ನು ಹೈಕೋರ್ಟ್ ವಿಭಾಗೀಯ ಪೀಠವು ಎತ್ತಿ ಹಿಡಿದಿದೆ.
ಈ ಕುರಿತಂತೆ ಗಣಪತಿ ತಂದೆ ಎಂ.ಕೆ. ಕುಶಾಲಪ್ಪ ಹಾಗೂ ಸಹೋದರ ಎಂ.ಕೆ.ಮಾಚಯ್ಯ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಹಾಗೂ ನ್ಯಾಯಮೂರ್ತಿ ಆರ್.ಬಿ.ಬೂದಿಹಾಳ್ ಅವರಿದ್ದ ವಿಭಾಗೀಯ ಪೀಠವು ಬುಧವಾರ ವಜಾ ಮಾಡಿ ಆದೇಶಿಸಿತು.
ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಯಾವುದೇ ಸಕಾರಣಗಳು ಕಂಡು ಬರುತ್ತಿಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠವು, ಅರ್ಜಿದಾರರ ಪರ ವಕೀಲ ಪವನಚಂದ್ರ ಶೆಟ್ಟಿ ಅವರ ವಾದವನ್ನು ತಳ್ಳಿ ಹಾಕಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.