ADVERTISEMENT

ಗಣಿತದಲ್ಲಿ 30 ಅಂಕ: ಪತ್ರ ಬರೆದಿಟ್ಟು ವಿದ್ಯಾರ್ಥಿನಿ ನಾಪತ್ತೆ

​ಪ್ರಜಾವಾಣಿ ವಾರ್ತೆ
Published 13 ಮೇ 2017, 19:37 IST
Last Updated 13 ಮೇ 2017, 19:37 IST
ಗಣಿತದಲ್ಲಿ 30 ಅಂಕ: ಪತ್ರ ಬರೆದಿಟ್ಟು ವಿದ್ಯಾರ್ಥಿನಿ ನಾಪತ್ತೆ
ಗಣಿತದಲ್ಲಿ 30 ಅಂಕ: ಪತ್ರ ಬರೆದಿಟ್ಟು ವಿದ್ಯಾರ್ಥಿನಿ ನಾಪತ್ತೆ   

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗಣಿತ ವಿಷಯಕ್ಕೆ 30 ಅಂಕ ಬಂದಿದೆ ಎಂಬ ಕಾರಣಕ್ಕೆ ವಿದ್ಯಾರ್ಥಿನಿ ವಾಸವಿ ಎಂಬಾಕೆ ಪತ್ರ ಬರೆದಿಟ್ಟು ನಾಪತ್ತೆಯಾಗಿದ್ದಾಳೆ.

ಆಕೆಗೆ ಗಣಿತ ಹೊರತುಪಡಿಸಿ ಎಲ್ಲ ವಿಷಯಗಳಿಗೆ ತಲಾ 80 ಅಂಕಗಳು ಬಂದಿತ್ತು. ‘ಶುಕ್ರವಾರ ಬೆಳಿಗ್ಗೆ ಪೋಷಕರು ಕೆಲಸಕ್ಕೆ ಹೋಗಿದ್ದರು. ಈ ವೇಳೆಯೇ ಪತ್ರವೊಂದನ್ನು ಬರೆದಿಟ್ಟು ವಿದ್ಯಾರ್ಥಿನಿ ಮನೆ ಬಿಟ್ಟು ಹೋಗಿದ್ದಾಳೆ’ ಎಂದು ಪೊಲೀಸರು ತಿಳಿಸಿದರು.

ಆತ್ಮಹತ್ಯೆ ಉಲ್ಲೇಖ: ‘ನಿಮ್ಮ ಕನಸುಗಳನ್ನು ಈಡೇರಿಸಲು ನನ್ನಿಂದ ಸಾಧ್ಯವಾಗಲಿಲ್ಲ. ದಯವಿಟ್ಟು ಕ್ಷಮಿಸಿಬಿಡಿ.  ನನಗಾಗಿ ನೀವು ಜಗಳ ಮಾಡಬೇಡಿ. ಸಂತೋಷದಿಂದ ಇರಿ. ನಾನು ಈಗ ಆತ್ಮಹತ್ಯೆ ಮಾಡಿಕೊಳ್ಳಲು ಹೋಗುತ್ತಿದ್ದು, ಹುಡುಕಬೇಡಿ’ ಎಂದು ವಿದ್ಯಾರ್ಥಿನಿ ಪತ್ರದಲ್ಲಿ ಬರೆದಿದ್ದಾಳೆ.

ADVERTISEMENT

ಪೋಷಕರು ವಿದ್ಯಾರಣ್ಯಪುರ ಠಾಣೆಗೆ ಶನಿವಾರ ದೂರು ಕೊಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.