ಬೆಂಗಳೂರು: ಗೌರಿ- ಗಣೇಶ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್ಆರ್ಟಿಸಿ) ಪ್ರಯಾಣಿಕರ ಅನುಕೂಲಕ್ಕಾಗಿ ಇದೇ 27 ಹಾಗೂ 28ರಂದು ನಗರದಿಂದ ವಿವಿಧ ಭಾಗಗಳಿಗೆ 1,000ಕ್ಕೂ ಅಧಿಕ ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಲಿದೆ.
ಮೆಜೆಸ್ಟಿಕ್ನಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಾಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಗುಲ್ಬರ್ಗ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ ಮಾಡಲಾಗುವುದು.
ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿಗೆ ಕಾರ್ಯಾಚರಣೆ ಮಾಡಲಾಗುವುದು.
ತಮಿಳುನಾಡು ಮತ್ತು ಆಂಧ್ರಪ್ರದೇಶ ಕಡೆಗೆ ಅಂದರೆ ಮಧುರೈ, ಕುಂಬಕೋಣಂ, ಚೆನ್ನೈ, ತಿರುಪತಿ, ವಿಜಯವಾಡ, ಹೈದರಾಬಾದ್ ಮತ್ತಿತರ ಕಡೆಗಳಿಗೆ ಶಾಂತಿ-ನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ವಿಶೇಷ ಕಾರ್ಯಾಚರಣೆ ಮಾಡಲಾಗುವುದು.
ವಿಜಯನಗರ, ಜೆ.ಪಿ.ನಗರ, ಜಯನಗರ ೪ನೇ ಬ್ಲಾಕ್ ಮತ್ತು ೯ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್ (ರಾಜಾಜಿನಗರ), ಮಲ್ಲೇಶ್ವರ ೧೮ನೇ ಅಡ್ಡ ರಸ್ತೆ, ಕೆಂಗೇರಿಯ ಉಪನಗರ ಮತ್ತಿತರ ಕಡೆಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುವುದು.
ವಾಯವ್ಯ ಕರ್ನಾಟಕದ ಕಡೆಗೆ (ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಾಪುರ, ಗೋಕರ್ಣ, ಶಿರಸಿ, ಕಾರವಾರ ಇತ್ಯಾದಿ) ಹಾಗೂ ಈಶಾನ್ಯ ಕರ್ನಾಟಕದ ಕಡೆಗೆ (ಗುಲ್ಬರ್ಗ, ಬಳ್ಳಾರಿ, ರಾಯಚೂರು, ಹೊಸಪೇಟೆ, ಕೊಪ್ಪಳ, ಯಾದಗಿರಿ, ಬೀದರ್ ಇತ್ಯಾದಿ) ವಿಶೇಷ ಸಾರಿಗೆಗಳನ್ನು ಮೈಸೂರು ರಸ್ತೆ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು. ಈ ಮಾರ್ಗಗಳಲ್ಲಿ ಕಾರ್ಯಾಚರಿಸುವ ಮುಂಗಡ ಕಾಯ್ದಿರಿಸದ ವಿಶೇಷ ಸಾರಿಗೆಗಳನ್ನು ಕೆಂಪೇಗೌಡ ಬಸ್ ನಿಲ್ದಾಣದಿಂದಲೇ ಕಾರ್ಯಾಚರಣೆ ಮಾಡಲಾಗುವುದು. ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
www.ksrtc.in ವೆಬ್ಸೈಟ್ ಮುಖಾಂತರ ಇ–ಟಿಕೆಟ್ ಬುಕ್ಕಿಂಗ್ ಮಾಡಬಹುದು. ಪ್ರಯಾಣಿಕರು ಬೆಂಗಳೂರಿನ ೧೭೩, ಮೈಸೂರಿನ ೧೪, ಮಂಗಳೂರಿನ ೫೪ ಹಾಗೂ ರಾಜ್ಯದ ಇತರ ಕಡೆಗಳಲ್ಲಿ ಇರುವ ೨೩೦ ಬುಕ್ಕಿಂಗ್ ಕೌಂಟರ್ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದು.
ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದರೆ ಶೇಕಡ ೫ ರಷ್ಟು ರಿಯಾಯಿತಿ ನೀಡಲಾಗುವುದು. ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್ ಅನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ ೧೦ ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಕೆಎಸ್ಆರ್ಟಿಸಿ ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.