ADVERTISEMENT

ಗಾಢ ನಿದ್ದೆಯಲ್ಲಿ ರಾಜ್ಯ ಸರ್ಕಾರ

ಸಂಸದೆ ಶೋಭಾ ಕರಂದ್ಲಾಜೆ ವ್ಯಂಗ್ಯ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2016, 19:30 IST
Last Updated 6 ಫೆಬ್ರುವರಿ 2016, 19:30 IST
ಕಗ್ಗಲೀಪುರದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಶೋಭಾ ಕರಂದ್ಲಾಜೆ ಅವರು ಮಾತನಾಡಿದರು. ಬಿಜೆಪಿ ಮುಖಂಡ ವೈಷ್ಣವಿ ರಮೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜಿ.ವಿಜಯಕುಮಾರ್, ಬೆಂಗಳೂರು ನಗರ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಘಟಕದ ಅಧ್ಯಕ್ಷ ವಾಜರಹಳ್ಳಿ ಶಶಿಕುಮಾರ್, ನಗರ ಜಿಲ್ಲಾ ಕಾರ್ಯದರ್ಶಿ ಜೆ.ರಮೇಶ್ ಚಿತ್ರದಲ್ಲಿದ್ದಾರೆ

ಬೆಂಗಳೂರು: ‘ರಾಜ್ಯ ಸರ್ಕಾರ ಅಭಿವೃದ್ಧಿ ಪಥದತ್ತ ಸಾಗದೆ ಸಂಪೂರ್ಣ ವಿಫಲವಾಗಿ ಗಾಢ ನಿದ್ದೆಯಲ್ಲಿದೆ’  ಎಂದು ಸಂಸದೆ ಶೋಭಾ ಕರಂದ್ಲಾಜೆ ವ್ಯಂಗ್ಯವಾಡಿದರು.

ಜಿಲ್ಲಾ ಪಂಚಾಯಿತಿ  ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಎ.ಶಿವಕುಮಾರ್ ಪರವಾಗಿ ಶನಿವಾರ ಕಗ್ಗಲೀಪುರದಲ್ಲಿ ಪ್ರಚಾರ ನಡೆಸಿ ಮತಯಾಚಿಸಿದ ಅವರು ಸಭೆಯಲ್ಲಿ ಮಾತನಾಡಿದರು.

‘ಅಹಿಂದ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಅವರು ಅಹಿಂದ ವರ್ಗಕ್ಕೆ ಏನು ಕೊಡುಗೆ ನೀಡಿದ್ದಾರೆ ಎನ್ನುವ ಕುರಿತು ಶ್ವೇತಪತ್ರ ಹೊರಡಿಸಲಿ’ ಎಂದು ಸವಾಲು ಹಾಕಿದರು.

‘ಈ ಕ್ಷೇತ್ರ ಅಭಿವೃದ್ಧಿ ಆಗಬೇಕಾದರೆ ಈ ಬಾರಿ ಜನರು ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಬೇಕು’ ಎಂದು ಮನವಿ ಮಾಡಿದರು.

ಎ.ಶಿವಕುಮಾರ್, ಸೋಮನಹಳ್ಳಿ ಜಿಲ್ಲಾ ಪಂಚಾಯಿತಿ ಅಭ್ಯರ್ಥಿ ಲಕ್ಷ್ಮಿ ಸುರೇಶ್, ದೊಡ್ಡಬೆಲೆ ಜಿಲ್ಲಾ ಪಂಚಾಯಿತಿ ಅಭ್ಯರ್ಥಿ ವೀಣಾ ನಾಗರಾಜು, ಅಗರ ಜಿಲ್ಲಾ ಪಂಚಾಯಿತಿ ಅಭ್ಯರ್ಥಿ ಸವಿತಾ ಸೋಮಣ್ಣ  ಅವರ ಪರವಾಗಿ ಶೋಭಾ ಅವರು ಮತ ಯಾಚಿಸಿದರು.

ಕಗ್ಗಲೀಪುರದಲ್ಲಿ ತಾಲ್ಲೂಕು ಪಂಚಾಯಿತಿ ಜೆಡಿಎಸ್ ಅಭ್ಯರ್ಥಿ ಕೇಶವಮೂರ್ತಿ ಪರವಾಗಿ ಮತ ಯಾಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.