ADVERTISEMENT

ಗಾಯಾಳುಗಳ ಜತೆ ಸೌಜನ್ಯದಿಂದ ವರ್ತಿಸಲು ವೈದ್ಯರಿಗೆ ಆದೇಶ

​ಪ್ರಜಾವಾಣಿ ವಾರ್ತೆ
Published 4 ಮೇ 2017, 19:55 IST
Last Updated 4 ಮೇ 2017, 19:55 IST

ಬೆಂಗಳೂರು: ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ಬರುವ ಗಾಯಾಳುಗಳ ಜೊತೆ ವೈದ್ಯರು ಮತ್ತು ಸಿಬ್ಬಂದಿ ಸೌಜನ್ಯದಿಂದ ವರ್ತಿಸಬೇಕು ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್‌ ಆದೇಶ ಹೊರಡಿಸಿದ್ದಾರೆ.

ಗಾಯಾಳುಗಳ ಸಂಬಂಧಿಗಳಿಗೆ ಕಾನೂನಿನ ಬಗ್ಗೆ ಮಾಹಿತಿ ನೀಡಿ ಅವರ ಸಹಕಾರದೊಂದಿಗೆ ಪೊಲೀಸ್‌ ಠಾಣೆಗೆ ವರದಿ ಸಲ್ಲಿಸಬೇಕು. ಕರ್ತವ್ಯ ಲೋಪ ಎಸಗುವ ವೈದ್ಯರು ಮತ್ತು ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

ಏ.30 ರಂದು ಆನೇಕಲ್‌ ಸರ್ಕಾರಿ ಆಸ್ಪತ್ರೆಯಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದ ಮಗು ಮೃತಪಟ್ಟಿದ್ದರಿಂದ ಈ ಆದೇಶ ಹೊರಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.