ADVERTISEMENT

ಗಿಡ ನೆಟ್ಟು ಸಂಭ್ರಮಿಸಿದ ವಿದ್ಯಾರ್ಥಿಗಳು

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2018, 20:04 IST
Last Updated 22 ಮಾರ್ಚ್ 2018, 20:04 IST
ಗಿಡ ನೆಟ್ಟು ಸಂಭ್ರಮಿಸಿದ ವಿದ್ಯಾರ್ಥಿಗಳು
ಗಿಡ ನೆಟ್ಟು ಸಂಭ್ರಮಿಸಿದ ವಿದ್ಯಾರ್ಥಿಗಳು   

ಬೆಂಗಳೂರು: ವಿಶ್ವ ಜಲ ದಿನದ ಪ್ರಯುಕ್ತ ಮಾರ್ಕ್‌ ಮೀಡಿಯಾ ಕಮ್ಯುನಿಕೇಷನ್ ಹಾಗೂ ಯುನೆಸ್ಕೊ ಸಂಸ್ಥೆ ಆಶ್ರಯದಲ್ಲಿ ಬ್ಯಾಟರಾಯನಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ‌ ‘ಜಲಕ್ಕಾಗಿ ಪ್ರಕೃತಿ’ ಕಾರ್ಯಕ್ರಮ ಜರುಗಿತು.

ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಶಾಲಾ ಆವರಣದಲ್ಲಿ ದಾಸವಾಳ, ಗುಲಾಬಿ, ಕಣಗಲೆ, ನಂದಿಬಟ್ಟಲು ಗಿಡಗಳನ್ನು ನೆಟ್ಟರು. ‘ಜಲಕ್ಕಾಗಿ ಪ್ರಕೃತಿ’ ವಿಷಯ ಕುರಿತು ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ಸ್ಪರ್ಧೆಯಲ್ಲಿ 53 ಮಕ್ಕಳು ಉತ್ಸಾಹದಿಂದ ಪಾಲ್ಗೊಂಡರು. ಪರಿಸರ ಸಂರಕ್ಷಣೆ ಕುರಿತ ಚಿತ್ರಗಳನ್ನು ಬಿಡಿಸಿದರು. ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.