ಬೆಂಗಳೂರು: ಮೈಕೊಲೇಔಟ್ ಪೊಲೀಸರು ರೌಡಿ ಮಹಮದ್ ಇರ್ಫಾನ್ನನ್ನು (19) ಶನಿವಾರ ಗೂಂಡಾ ಕಾಯ್ದೆಯಡಿ ಬಂಧಿಸಿದ್ದಾರೆ.
ಹಲ್ಲೆ, ದರೋಡೆ, ಸುಲಿಗೆ, ಕಳ್ಳತನ ಸೇರಿದಂತೆ ಇರ್ಫಾನ್ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ಆರು ಪ್ರಕರಣಗಳು ದಾಖಲಾಗಿವೆ.
ಜೈಲಿನಿಂದ ಇತ್ತೀಚೆಗೆ ಬಿಡುಗಡೆಯಾಗಿದ್ದ ಆತ, ಮಾರಕಾಸ್ತ್ರ ಹಿಡಿದುಕೊಂಡು ಓಡಾಡುವ ಮೂಲಕ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ ಎಂದು ಪೊಲೀಸರು ಹೇಳಿದರು. ಕಮಿಷನರ್ ಎಂ.ಎನ್.ರೆಡ್ಡಿ ಅವರ ಆದೇಶದಂತೆ ಗೂಂಡಾ ಕಾಯ್ದೆ ಅಡಿ ಇರ್ಫಾನ್ನನ್ನು ಬಂಧಿಸಿ, ಜೈಲಿಗೆ ಕಳುಹಿಸಲಾಗಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.