ADVERTISEMENT

ಗೋಡೆಗಳ ವಿರೂಪ 12 ಸಂಸ್ಥೆಗಳ ವಿರುದ್ಧ ದೂರು

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2016, 19:37 IST
Last Updated 26 ಸೆಪ್ಟೆಂಬರ್ 2016, 19:37 IST

ಬೆಂಗಳೂರು: ಅನುಮತಿ ಪಡೆಯದೆ ಸಾರ್ವಜನಿಕ ಸ್ಥಳಗಳಲ್ಲಿ ಜಾಹೀರಾತು ಪ್ರದರ್ಶನ ಮಾಡುವವರು ಹಾಗೂ ಗೋಡೆಗಳನ್ನು ವಿರೂಪಗೊಳಿಸುವವರ ವಿರುದ್ಧ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವತಿಯಿಂದ ಬಿಎಂಟಿಎಫ್‌ನಲ್ಲಿ ಪ್ರಕರಣ ದಾಖಲಿಸುವ ಕಾರ್ಯಕ್ಕೆ ಸೋಮವಾರ ಚಾಲನೆ ನೀಡಲಾಯಿತು.

ಕೆ.ಆರ್‌. ವೃತ್ತದಲ್ಲಿ ಸಾರ್ವಜನಿಕ ಸ್ಥಳ ವಿರೂಪಗೊಳಿಸಿದ ಆರೋಪದ ಮೇಲೆ 12 ಸಂಸ್ಥೆಗಳ ವಿರುದ್ಧ ಮೊಕದ್ದಮೆ ದಾಖಲಿಸಲಾಯಿತು. ಕಾರ್ಯಾಚರಣೆಗೆ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ್‌ ಪ್ರಸಾದ್‌ ಚಾಲನೆ ನೀಡಿದರು.

‘ಗೋಡೆಗಳ ಮೇಲಿನ ಜಾಹೀರಾತು ಬರಹವನ್ನು ಅಳಿಸಿ, ಬಣ್ಣ ಹಚ್ಚಲು ಸೂಚಿಸಿದ ಆಯುಕ್ತರು, ಅದಕ್ಕೆ ತಗಲುವ ವೆಚ್ಚವನ್ನು ಆಯಾ ಸಂಸ್ಥೆಗಳಿಂದಲೇ ವಸೂಲಿ ಮಾಡಬೇಕು’ ಎಂದು ಸೂಚಿಸಿದರು.

ಮೇಯರ್‌ ಚುನಾವಣೆಗೆ150ಕ್ಕೂ ಅಧಿಕ ಪೊಲೀಸರಿಂದ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗುತ್ತದೆ. ಚುನಾವಣಾ ಕೊಠಡಿಯಲ್ಲಿ 10 ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ. ಪಾಸ್‌ ಇದ್ದವರಿಗೆ ಮಾತ್ರ ಸಭಾಂಗಣಕ್ಕೆ ಪ್ರವೇಶಾವಕಾಶ ಕಲ್ಪಿಸಲಾಗುತ್ತದೆ ಎಂದು ಆಯುಕ್ತರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.