ADVERTISEMENT

ಗ್ರಾಮ ಸಹಾಯಕರ ಖಾಯಂಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2014, 19:58 IST
Last Updated 24 ನವೆಂಬರ್ 2014, 19:58 IST
ಕಂದಾಯ ಇಲಾಖೆಯಲ್ಲಿ 35 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಗ್ರಾಮ ಸಹಾಯಕರನ್ನು  ‘ಡಿ’ ದರ್ಜೆ ನೌಕರರೆಂದು ಪರಿಗಣಿಸಿ ಸೇವಾ ಭದ್ರತೆ ಒದಗಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಕಂದಾಯ ಇಲಾಖಾ ಗ್ರಾಮ ಸಹಾಯಕರ ಸಂಘದ ಸದಸ್ಯರು ನಗರ ರೈಲು ನಿಲ್ದಾಣದಿಂದ ಮುಖ್ಯಮಂತ್ರಿಗಳ ನಿವಾಸದವರೆಗೆ ಸೋಮವಾರ ಪ್ರತಿಭಟನೆ ನಡೆಸಿದರು 	–ಪ್ರಜಾವಾಣಿ ಚಿತ್ರ

ಬೆಂಗಳೂರು: ಕಂದಾಯ ಇಲಾಖೆಯಲ್ಲಿ 35 ವರ್ಷ­ಗಳಿಂದ ಸೇವೆ ಸಲ್ಲಿಸುತ್ತಿರುವ ಗ್ರಾಮ ಸಹಾಯಕರನ್ನು  ‘ಡಿ’ ದರ್ಜೆ ನೌಕರರೆಂದು ಪರಿಗಣಿಸಿ ಸೇವಾ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ರಾಜ್ಯ ಕಂದಾಯ ಇಲಾಖಾ ಗ್ರಾಮ ಸಹಾಯಕರ ಸಂಘದ ಸದಸ್ಯರು ನಗರ ರೈಲು ನಿಲ್ದಾಣದಿಂದ ಮುಖ್ಯಮಂತ್ರಿಗಳ ನಿವಾಸ­ದವರೆಗೆ ಸೋಮವಾರ ಪ್ರತಿಭಟನೆ ನಡೆಸಿದರು.

ಸಂಘದ ಅಧ್ಯಕ್ಷ ಮುದ್ದುಕೃಷ್ಣ ಮಾತನಾಡಿ, ‘1977–78ರಲ್ಲಿ ಕಂದಾಯ ಇಲಾಖೆಯಲ್ಲಿ 10,450 ಗ್ರಾಮ ಸಹಾಯಕರ ಹುದ್ದೆಗಳನ್ನು ಸೃಷ್ಟಿ ಮಾಡಲಾಗಿದೆ. ಆದರೆ, ಈವರೆಗೂ ಅವರಿಗೆ ಸೇವಾ ಭದ್ರತೆ ಕಲ್ಪಿಸಿಲ್ಲ’ ಎಂದು ದೂರಿದರು.

ಹತ್ತು ವರ್ಷಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದವರಿಗೆ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಬಡ್ತಿ ನೀಡಬೇಕು. 35 ವರ್ಷ ಸೇವೆ ಸಲ್ಲಿಸಿ ನಿವೃತ್ತಿಯಾದವರಿಗೆ ಕೂಡಲೇ ಬಾಕಿ ಹಣ ನೀಡಬೇಕು. ಕಡ್ಡಾಯವಾಗಿ ನಿವೃತ್ತಿ ವೇತನ ನೀಡಬೇಕು. ರಾಜ್ಯ ಸರ್ಕಾರದ 1993ರ ಆದೇಶದಂತೆ ಗ್ರಾಮ ಸಹಾಯಕರು ಸೇವೆಯಲ್ಲಿದ್ದಾಗ ಮರಣ ಹೊಂದಿದರೆ ಅನುಕಂಪದ ಆಧಾರದ ಮೇಲೆ ಅವರ ಕುಟುಂಬದವರನ್ನು ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.