ADVERTISEMENT

ಚುನಾವಣೆಗೆ ಸಕಲ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2016, 19:30 IST
Last Updated 27 ಸೆಪ್ಟೆಂಬರ್ 2016, 19:30 IST
ಬುಧವಾರ ನಡೆಯುವ ಬಿಬಿಎಂಪಿ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ವಿ.ಶಂಕರ್‌ ಅವರು ಸಿದ್ಧತಾ ವ್ಯವಸ್ಥೆ ಪರಿಶೀಲನೆ ಮಾಡಿದರು
ಬುಧವಾರ ನಡೆಯುವ ಬಿಬಿಎಂಪಿ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ವಿ.ಶಂಕರ್‌ ಅವರು ಸಿದ್ಧತಾ ವ್ಯವಸ್ಥೆ ಪರಿಶೀಲನೆ ಮಾಡಿದರು   

ಬೆಂಗಳೂರು: ಮೇಯರ್ ಹಾಗೂ ಉಪ ಮೇಯರ್‌ ಚುನಾವಣೆಯು ಬುಧವಾರ ನಡೆಯಲಿದ್ದು, ಎಲ್ಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ.

ಪ್ರಾದೇಶಿಕ ಆಯುಕ್ತೆ ವಿ.ಜಯಂತಿ ಅವರು ಚುನಾವಣಾ ಪ್ರಕ್ರಿಯೆ ನಡೆಸಲಿದ್ದಾರೆ.  ಚುನಾವಣೆಗೆ ನಡೆದ ಸಿದ್ಧತಾ ಕಾರ್ಯಗಳನ್ನು ಮಂಗಳವಾರ ಅವರು ಪರಿಶೀಲಿಸಿದರು. ನಗರ ಜಿಲ್ಲಾಧಿಕಾರಿ ವಿ.ಶಂಕರ್‌ ಕೂಡ ಸಿದ್ಧತಾ ಕಾರ್ಯಗಳ ಮೇಲುಸ್ತುವಾರಿ ನೋಡಿಕೊಂಡರು.

ಒಟ್ಟಾರೆ 269 ಸದಸ್ಯರು ಮತದಾನದ ಹಕ್ಕು ಹೊಂದಿದ್ದು, ಆಸನದ ವ್ಯವಸ್ಥೆ ಮಾಡಲಾಗಿದೆ. ಗೊಂದಲಕ್ಕೆ ಅವಕಾಶ ಇಲ್ಲದಂತೆ ನೋಡಿಕೊಳ್ಳಲು ಸದಸ್ಯರಿಗೆ ಗೊತ್ತುಪಡಿಸಿದ ಆಸನಗಳ ಮುಂದೆ ನಾಮಫಲಕಗಳನ್ನೂ ಇಡಲಾಗಿದೆ. ಬ್ಯಾಲೆಟ್‌ ಮತದಾನ ಅಗತ್ಯವಾದರೆ ಅದಕ್ಕೂ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ಮತದಾನದ ಒಟ್ಟು ಪ್ರಕ್ರಿಯೆಯನ್ನು ವಿಡಿಯೊ ಚಿತ್ರೀಕರಣ ಮಾಡಿಸಲಾಗುತ್ತದೆ. ಸಿ.ಸಿ. ಟಿ.ವಿ ಕ್ಯಾಮೆರಾಗಳನ್ನು ಸಹ ಅಳವಡಿಸಲಾಗಿದೆ. ಪಾಸ್‌ ಇದ್ದವರಿಗೆ ಮಾತ್ರ ಕೌನ್ಸಿಲ್‌ ಸಭಾಂಗಣದ ಒಳಗೆ ಬಿಡಲಾಗುತ್ತದೆ. ಸುಮಾರು 150 ಪೊಲೀಸರನ್ನು ಭದ್ರತಾ ವ್ಯವಸ್ಥೆಗೆ ನಿಯೋಜಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.