ADVERTISEMENT

ಜನವಿರೋಧಿ ನೀತಿಗೆ ಖಂಡನೆ

​ಪ್ರಜಾವಾಣಿ ವಾರ್ತೆ
Published 26 ಮೇ 2017, 20:10 IST
Last Updated 26 ಮೇ 2017, 20:10 IST
ಸಿಪಿಐಎಂ ಸಂಘಟನೆಯ ಕಾರ್ಯಕರ್ತರು ಬಿಬಿಎಂಪಿ ಕಚೇರಿ ಎದುರು ಪ್ರತಿಭಟಿಸಿದರು
ಸಿಪಿಐಎಂ ಸಂಘಟನೆಯ ಕಾರ್ಯಕರ್ತರು ಬಿಬಿಎಂಪಿ ಕಚೇರಿ ಎದುರು ಪ್ರತಿಭಟಿಸಿದರು   

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳನ್ನು ವಿರೋಧಿಸಿ ಸಿಪಿಐಎಂ ಕಾರ್ಯಕರ್ತರು  ಕೆ.ಆರ್‌.ಪುರದಲ್ಲಿನ ಬಿಬಿಎಂಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.   

‘ಸಾವಿರ ದಿನ ಪೂರೈಸಿದರೂ ಕೇಂದ್ರ ಸರ್ಕಾರ ದುಡಿವ ಜನರಿಗೆ ಯಾವುದೇ ಅನುಕೂಲಗಳನ್ನು ಕಲ್ಪಿಸಿಲ್ಲ.  ಚುನಾವಣೆಯಲ್ಲಿ  ನೀಡಿದ ಭರವಸೆಗಳು ಹುಸಿಯಾಗಿವೆ’ ಎಂದು ಸಿಪಿಐಎಂ ಬೆಂಗಳೂರು ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಎಚ್.ಎನ್. ಗೋಪಾಲಗೌಡ ಆರೋಪಿಸಿದರು.

‘ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುವುದಿರಲಿ, ಇರುವ ಉದ್ಯೋಗವನ್ನೂ ಕಿತ್ತುಕೊಳ್ಳುತ್ತಿದ್ದಾರೆ. ಸರ್ಕಾರಿ ಕೈಗಾರಿಕೆಗಳನ್ನು ಖಾಸಗಿಯವರಿಗೆ ಒಪ್ಪಿಸಿ ಉದ್ಯೋಗಳನ್ನು ನಾಶ ಮಾಡಿದ್ದಾರೆ’ ಎಂದರು.

ADVERTISEMENT

‘ರಾಜ್ಯ ಸರ್ಕಾರ ಬರ ನಿರ್ವಹಣಾ ಕ್ರಮಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳುತ್ತಿಲ್ಲ, ಸಾಲಮನ್ನ ಮಾಡಬೇಕು, ಗುತ್ತಿಗೆ ಮತ್ತು ಹೊರಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಿ ಎಲ್ಲಾ ಸ್ಕೀಮ್ ನೌಕರರನ್ನು ಕನಿಷ್ಠ ವೇತನ ಕಾಯ್ದೆ ವ್ಯಾಪ್ತಿಗೆ ತರಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.