ADVERTISEMENT

ಜನಾರ್ದನ ರೆಡ್ಡಿ ಆಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 25 ಜುಲೈ 2014, 19:42 IST
Last Updated 25 ಜುಲೈ 2014, 19:42 IST

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಅನಾರೋಗ್ಯದ ಕಾರಣದಿಂದ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆನ್ನು ನೋವಿನಿಂದ ಬಳಲುತ್ತಿರುವ ಅವರು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಅವಕಾಶ ಕೋರಿ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಮನವಿಯನ್ನು ಪುರಸ್ಕರಿಸಿದ್ದ ನ್ಯಾಯಾಲಯ ಪೊಲೀಸ್ ಬಂದೋಬಸ್ತ್‌ನಲ್ಲಿ ಚಿಕಿತ್ಸೆ ಒದಗಿಸುವಂತೆ ಆದೇಶಿಸಿತ್ತು. ಹೀಗಾಗಿ ಪೊಲೀಸರು ಜನಾರ್ದನ ರೆಡ್ಡಿ ಅವರನ್ನು ಹೆಬ್ಬಾಳದ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ.

‘ರೆಡ್ಡಿ ಅವರನ್ನು ಜು.22ರಂದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ವೈದ್ಯರ ಸೂಚನೆ ನಂತರ ಜೈಲಿಗೆ ವಾಪಸ್‌ ಕರೆದೊಯ್ಯಲಾಗುವುದು. ರೆಡ್ಡಿ ಅವರ ಕೊಠಡಿ ಸೇರಿದಂತೆ ಆಸ್ಪತ್ರೆ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ’ ಎಂದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಡಿಐಜಿ ವಿಶ್ವನಾಥಯ್ಯ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.