ADVERTISEMENT

ಜಲವಿವಾದ: ಕಾನೂನು ತಜ್ಞರ ಜತೆ ಸಚಿವರ ಚರ್ಚೆ ಇಂದು

​ಪ್ರಜಾವಾಣಿ ವಾರ್ತೆ
Published 20 ಜನವರಿ 2017, 19:56 IST
Last Updated 20 ಜನವರಿ 2017, 19:56 IST

ಬೆಂಗಳೂರು: ಕಾವೇರಿ, ಕೃಷ್ಣಾ ಹಾಗೂ ಮಹಾದಾಯಿ ಜಲವಿವಾದಗಳಿಗೆ ಸಂಬಂಧಿಸಿದಂತೆ ಮುಂದಿನ ಕಾನೂನು ಹೋರಾಟದ ರೂಪುರೇಷೆಗಳ ಕುರಿತು ಹಿರಿಯ ವಕೀಲ ಎಫ್.ಎಸ್. ನಾರಿಮನ್ ನೇತೃತ್ವದ ಕಾನೂನು ತಜ್ಞರ ಜೊತೆ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ಅವರು ಶನಿವಾರ ದೆಹಲಿಯಲ್ಲಿ ಚರ್ಚೆ ನಡೆಸಲಿದ್ದಾರೆ.

ಕಾವೇರಿ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿದಿರುವುದರಿಂದ ಪ್ರತಿನಿತ್ಯ ತಮಿಳುನಾಡಿಗೆ 2 ಸಾವಿರ ಕ್ಯುಸೆಕ್‌ ನೀರು ಹರಿಸಲು ಸಾಧ್ಯವಾಗದ ಕುರಿತು ವಸ್ತುಸ್ಥಿತಿಯನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡುವ ಸಂಬಂಧ ಸಚಿವರು ನಾರಿಮನ್ ಜತೆ ಚರ್ಚಿಸಲಿದ್ದಾರೆ.

ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 524. 56 ಅಡಿ ಎತ್ತರಿಸುವ ಸಂಬಂಧ ಕೃಷ್ಣಾ ಜಲವಿವಾದ ನ್ಯಾಯಮಂಡಳಿ ಮುಂದೆ ಮನವಿ ಸಲ್ಲಿಸುವ ಕುರಿತು ಕೂಡಾ ಈ ಸಭೆಯಲ್ಲಿ ಪ್ರಸ್ತಾಪವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.