ADVERTISEMENT

ಟಿ.ವಿ ವರದಿಗಾರನ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2016, 19:45 IST
Last Updated 3 ಡಿಸೆಂಬರ್ 2016, 19:45 IST

ಬೆಂಗಳೂರು: ಪ್ರಜಾ ಟಿ.ವಿ ವರದಿಗಾರ ಡಿ.ಎಂ.ಮಂಜುನಾಥ್‌ ಅವರ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ಸಾರ್ವಜನಿಕರು ರಾಜಾನುಕುಂಟೆ ಪೊಲೀಸ್‌ಠಾಣೆ ಮುಂಭಾಗದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾ ಪಂಚಾಯ್ತಿ ಸದಸ್ಯೆ ಲಾವಣ್ಯ ನರಸಿಂಹ ಮೂರ್ತಿ ಮಾತನಾಡಿ, ‘ರಾಜಾನುಕುಂಟೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಹಲವು ಬಡಾವಣೆಗಳು ತಲೆ ಎತ್ತುತ್ತಿವೆ. ಈ ಪ್ರದೇಶವು ಭೂ ಗಳ್ಳರು ಹಾಗೂ ರೌಡಿಗಳ ತಾಣವಾಗಿ ಮಾರ್ಪಡುತ್ತಿದೆ. ಭ್ರಷ್ಟ ವ್ಯವಸ್ಥೆಯನ್ನು ಬಯಲಿಗೆಳೆಯುವ ಸಲುವಾಗಿ ವರದಿ ಮಾಡಲು ತೆರಳಿದ್ದ ಮಂಜುನಾಥ್‌  ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವುದು ಖಂಡನೀಯ’ ಎಂದರು.

ಕಾಂಗ್ರೆಸ್‌ ಮುಖಂಡ ಕೇಶವ ರಾಜಣ್ಣ ಮಾತನಾಡಿ, ‘ಹಲ್ಲೆ ನಡೆಸಿರುವ  ಆರೋಪಿಗಳನ್ನು ಗೂಂಡಾ ಕಾಯ್ದೆಯಡಿ ಬಂಧಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

ತಂಡಗಳ ರಚನೆ: ಆರೋಪಿಗಳ ಪತ್ತೆಗಾಗಿ ನಾಲ್ಕು  ತಂಡಗಳನ್ನು ರಚಿಸಲಾಗಿದೆ ಎಂದು ದೊಡ್ಡಬಳ್ಳಾಪುರ ವೃತ್ತದ ಡಿವೈಎಸ್‌ಪಿ ನಾಗರಾಜ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.