ADVERTISEMENT

ಟ್ರಾನ್ಸ್‌ಫಾರ್ಮರ್ ಸ್ಫೋಟ: ಬಾಲಕಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2018, 19:58 IST
Last Updated 20 ಏಪ್ರಿಲ್ 2018, 19:58 IST

ಬೆಂಗಳೂರು: ನೀಲಸಂದ್ರದ ಬಿಡಿಎ ಕಾಂಪ್ಲೆಕ್ಸ್‌ ಬಳಿ ಟ್ರಾನ್ಸ್‌ಫಾರ್ಮರ್‌ ಸ್ಫೋಟದಿಂದ ಗಂಭೀರ ಗಾಯಗೊಂಡಿದ್ದ ಬಾಲಕಿ ಸಾವು ಬದುಕಿನ ನುಡುವೆ ಹೋರಾಡುತ್ತಿದ್ದಾಳೆ.

ಬಾಲಕಿಯು ಸಂಬಂಧಿಕರಿಗೆ ಭಾನುವಾರ ಊಟ ಕೊಡಲು ಹೋಗುತ್ತಿದ್ದ ವೇಳೆ ಮನೆ ಎದುರಿನ ಟ್ರಾನ್ಸ್‌ಫಾರ್ಮರ್‌ ಇದ್ದಕ್ಕಿದ್ದಂತೆ ಸ್ಫೋಟ
ಗೊಂಡಿತ್ತು. ಇದರಿಂದಾಗಿ 12 ವರ್ಷದ ಜೆನಿಫರ್‌ ಜಗನ್‌ ಗಂಭೀರವಾಗಿ ಗಾಯಗೊಂಡಿದ್ದಳು.

ಆಕೆಯನ್ನು ಸೇಂಟ್‌ ಜಾನ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ನಂತರ ಹೊಸೂರು ರಸ್ತೆ ಬಳಿಯ ಬ್ಲಾಸಮ್ಸ್‌ ಆಸ್ಪತ್ರೆಗೆ ಸೇರಿಸಲಾಗಿತ್ತು.

ADVERTISEMENT

‘ಜೆನಿಫರ್‌ ತುರ್ತು ನಿಗಾ ಘಟಕದಲ್ಲಿ ಇದ್ದಾಳೆ. ಹೊಟ್ಟೆಯ ಭಾಗ ಹೆಚ್ಚು ಸುಟ್ಟಿರುವುದರಿಂದ ಶಸ್ತ್ರ ಚಿಕಿತ್ಸೆ ಅನಿವಾರ್ಯ ಎಂದು ವೈದ್ಯರು ಹೇಳಿದ್ದಾರೆ. ಅಶೋಕನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದೇವೆ. ಚಿಕಿತ್ಸೆಗಾಗಿ ₹ 1 ಲಕ್ಷಕ್ಕಿಂತ ಹೆಚ್ಚು ಖರ್ಚಾಗುವ ಸಾಧ್ಯತೆ ಇದೆ. ಆದರೆ ನಮ್ಮ ಬಳಿ ಅಷ್ಟು ಹಣ ಇಲ್ಲ’ ಎಂದು ಜೆನಿಫರ್‌ ಸಂಬಂಧಿ ಶರವಣ ಅಳಲು ತೋಡಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.