ADVERTISEMENT

ಠಾಕೂರ್ ವರ್ಗಾವಣೆಗೆ ತಡೆ

​ಪ್ರಜಾವಾಣಿ ವಾರ್ತೆ
Published 25 ಮೇ 2017, 19:42 IST
Last Updated 25 ಮೇ 2017, 19:42 IST

ಬೆಂಗಳೂರು: ಪ್ರಶಾಂತ್ ಕುಮಾರ್ ಠಾಕೂರ್  ಅವರನ್ನು ಮಹಾನಗರ ಕಾರ್ಯಪಡೆ (ಬಿಎಂಟಿಎಫ್) ಎಡಿಜಿಪಿ ಹುದ್ದೆಯಿಂದ ವರ್ಗಾವಣೆ ಮಾಡಿರುವ ಆದೇಶಕ್ಕೆ ಹೈಕೋರ್ಟ್ ಗುರುವಾರ ಮಧ್ಯಂತರ ತಡೆ ನೀಡಿದೆ.

ಈ ಆದೇಶ ಪ್ರಶ್ನಿಸಿ ಠಾಕೂರ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾ. ರವಿ ಮಳೀಮಠ ಹಾಗೂ ನ್ಯಾ. ಜಾನ್ ಮೈಕಲ್ ಕುನ್ಹಾ ಅವರಿದ್ದ ರಜಾಕಾಲದ ಪೀಠ,ಈ ಆದೇಶ ನೀಡಿದೆ.

ಅರ್ಜಿದಾರರು ಬಿಎಂಟಿಎಫ್ ಎಡಿಜಿಪಿ ಹುದ್ದೆಯಲ್ಲೇ ಮುಂದುವರಿಯಲು ಅವಕಾಶ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. ‘2017ರ ಜ.2ರಂದು ಈ ಹುದ್ದೆಗೆ ಠಾಕೂರ್ ಅವರನ್ನು ವರ್ಗಾವಣೆ ಮಾಡಿದ್ದ ಸರ್ಕಾರ, ಮತ್ತೆ ಮಾ.22ರಂದು ಬೇರೆಡೆಗೆ ವರ್ಗಾಯಿಸಿದೆ. 

ಅವಧಿಪೂರ್ವ ವರ್ಗಾವಣೆ ಪ್ರಶ್ನಿಸಿ  ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ಮೊರೆ ಹೋಗಿದ್ದರು. ಆದರೆ, ವರ್ಗಾವಣೆ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಲು ಸಿಎಟಿ ನಿರಾಕರಿಸಿತ್ತು.

ಸಿಎಟಿಯಲ್ಲಿ ಅರ್ಜಿ ಇತ್ಯರ್ಥವಾಗುವ ತನಕ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಬೇಕು’ ಎಂದು ಅರ್ಜಿದಾರರ ಪರ ವಕೀಲ ಡಿ.ಆರ್‌. ರವಿಶಂಕರ್ ಅವರು ಹೈಕೋರ್ಟ್‌ಗೆ ಮನವಿ ಮಾಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.