ADVERTISEMENT

ಡೆಂಗಿ ಜ್ವರ: ಜಾಗೃತಿ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 27 ಮೇ 2016, 19:50 IST
Last Updated 27 ಮೇ 2016, 19:50 IST

ಹೊಸಕೋಟೆ: ‘ಡೆಂಗಿ ಜ್ವರ ಬರದಂತೆ ತಡೆಗಟ್ಟಲು ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು’ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಧರ್ಮೇಂದ್ರ ಕುಮಾರ್ ಹೇಳಿದರು.

ಡೆಂಗಿ ನಿಯಂತ್ರಣ ದಿನಾಚರಣೆ ಅಂಗವಾಗಿ ಶುಕ್ರವಾರ ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು  ಉದ್ದೇಶಿಸಿ ಮಾತನಾಡಿದ ಅವರು, ‘ಈಡಿಸ್ ಈಜಿಪ್ಟಿ ಸೊಳ್ಳೆಗಳ ಕಡಿತದಿಂದ ಡೆಂಗಿ ಬರುತ್ತದೆ. ಆದ್ದರಿಂದ ಈ  ಸೊಳ್ಳೆಗಳ ನಾಶಕ್ಕೆ ಮುಂದಾಗಬೇಕಿದೆ. ಈ ಸೊಳ್ಳೆಗಳ ಉತ್ಪತ್ತಿಗೆ ಜೂನ್‌ ತಿಂಗಳಲ್ಲಿ ಪೂರಕ ವಾತಾವರಣ ಇರುತ್ತದೆ. ಹೀಗಾಗಿ ಮನೆಯ ಸುತ್ತ ಸ್ವಚ್ಛ ನೀರು ನಿಲ್ಲದಂತೆ ನೋಡಿಕೊಳ್ಳಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.