ADVERTISEMENT

ತಿಮ್ಮಕ್ಕಗೆ ಜೀವ ಬೆದರಿಕೆ

​ಪ್ರಜಾವಾಣಿ ವಾರ್ತೆ
Published 28 ಜೂನ್ 2017, 20:49 IST
Last Updated 28 ಜೂನ್ 2017, 20:49 IST
ಸಾಲು ಮರದ ತಿಮ್ಮಕ್ಕ
ಸಾಲು ಮರದ ತಿಮ್ಮಕ್ಕ   

ಬೆಂಗಳೂರು: ಸಾಲು ಮರದ ತಿಮ್ಮಕ್ಕ ಅವರಿಗೆ ಜೀವ ಬೆದರಿಕೆ ಇದ್ದು, ಆತ್ಮರಕ್ಷಣೆಗಾಗಿ ಗನ್ ಇಟ್ಟುಕೊಳ್ಳಲು ಅನುಮತಿ ನೀಡುವಂತೆ ಕೋರಿ ಅವರ ಸಾಕುಮಗ ಉಮೇಶ್ ಮಂಗಳವಾರ ನಗರ ಪೊಲೀಸ್ ಕಮಿಷನರ್ ಪ್ರವೀಣ್ ಸೂದ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

‘ತಿಮ್ಮಕ್ಕ ಸದ್ಯ ಪೀಣ್ಯದ ಸಾಬೂನು ಕಾರ್ಖಾನೆ ಲೇಔಟ್‌ನಲ್ಲಿ ನೆಲೆಸಿದ್ದಾರೆ. ಅಪರಿಚಿತ ಮೊಬೈಲ್ ಸಂಖ್ಯೆಗಳಿಂದ ಅವರಿಗೆ ಬೆದರಿಕೆ ಕರೆಗಳು ಬರುತ್ತಿವೆ. ಅಲ್ಲದೆ, ಪ್ರತಿದಿನ ರಾತ್ರಿ ಮನೆ ಸುತ್ತ ಅಪರಿಚಿತರ ಓಡಾಟ ಹೆಚ್ಚಾಗಿದೆ’ ಎಂದು ಉಮೇಶ್ ಪತ್ರದಲ್ಲಿ ಹೇಳಿದ್ದಾರೆ. 

‘ಅಮೆರಿಕದಲ್ಲಿರುವ ನಕಲಿ ಎನ್‌ಜಿಒಗಳ ವಿರುದ್ಧವೂ ಅವರು ದೂರು ಕೊಟ್ಟಿದ್ದರು. ಅದು ಕೂಡ ಜೀವಕ್ಕೆ ಅಪಾಯ ತರುವ ಸಾಧ್ಯತೆ ಇದೆ.’
‘ರಕ್ಷಣೆ ಕೋರಿ ಮುಖ್ಯಮಂತ್ರಿ ಹಾಗೂ ಸಚಿವ ಕೆ.ಜೆ.ಜಾರ್ಜ್‌ ಅವರಿಗೆ ಮನವಿ ಕೊಟ್ಟರೂ ಪ್ರಯೋಜನವಾಗಿಲ್ಲ. ಅಭದ್ರತೆ ಕಾರಣದಿಂದಲೇ ಹುಟ್ಟೂರು ಹುಲಿಕಲ್ಲು ಗ್ರಾಮ ತೊರೆದು ಬೆಂಗಳೂರಿಗೆ ಬಂದಿದ್ದೇವೆ.

ADVERTISEMENT

ಇತ್ತೀಚೆಗೆ ಮನೆಯಲ್ಲಿ ಕಳ್ಳತನ ನಡೆದಿದೆ. ಈ ಎಲ್ಲ ಕಾರಣಗಳಿಂದ ಕನಿಷ್ಠ ಗನ್‌ ಇಟ್ಟುಕೊಳ್ಳುವುದಕ್ಕಾದರೂ ಅನುಮತಿ ನೀಡಬೇಕು’ ಎಂದು ಮನವಿ ಮಾಡಿದ್ದಾರೆ. ಭದ್ರತೆಗೆ ಸಿಬ್ಬಂದಿ ನೇಮಿಸಲು ಸಾಧ್ಯವಿಲ್ಲ, ಆದರೆ ಗನ್ ಪರವಾನಗಿಗೆ ಅನುಮತಿ ಕೊಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.