ADVERTISEMENT

ತೆರಿಗೆ ವಿನಾಯ್ತಿ ಜೂನ್‌ ಅಂತ್ಯದವರೆಗೆ

​ಪ್ರಜಾವಾಣಿ ವಾರ್ತೆ
Published 27 ಮೇ 2016, 20:05 IST
Last Updated 27 ಮೇ 2016, 20:05 IST

ಬೆಂಗಳೂರು: ಆಸ್ತಿ ತೆರಿಗೆಯಲ್ಲಿ ಶೇ 5ರಷ್ಟು ವಿನಾಯ್ತಿ ನೀಡುವ ಸೌಲಭ್ಯವನ್ನು ಜೂನ್‌ ತಿಂಗಳ ಅಂತ್ಯದವರೆಗೆ ವಿಸ್ತರಿಸಲು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಿರ್ಧರಿಸಿದೆ.

ಪ್ರಸಕ್ತ ಆರ್ಥಿಕ ವರ್ಷದಿಂದ ಹೊಸದಾಗಿ ಅನುಷ್ಠಾನಕ್ಕೆ ತರಲಾದ ಆನ್‌ಲೈನ್‌ ವ್ಯವಸ್ಥೆಯಲ್ಲಿ ಹಲವು ಲೋಪಗಳು ಉಂಟಾಗಿದ್ದರಿಂದ ಕಳೆದ ಎರಡು ತಿಂಗಳಲ್ಲಿ ನಾಗರಿಕರಿಗೆ ತೆರಿಗೆ ಪಾವತಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಈ ತೀರ್ಮಾನ ಕೈಗೊಳ್ಳಲಾಗಿದೆ.

‘ಪ್ರಜಾವಾಣಿ’ ಜತೆ ಮಾತನಾಡಿದ ಬಿಬಿಎಂಪಿ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಶಿವರಾಜು, ‘ಖಾತಾ ಹೆಸರು ಬದಲಾವಣೆಯಲ್ಲಿ ಉಂಟಾಗಿರುವ ಗೊಂದಲವನ್ನು ಇನ್ನು 2–3 ದಿನಗಳಲ್ಲಿ ಪರಿಹರಿಸಲಾಗುವುದು. ಖಾತೆಗಳ ಹೆಸರು ಬದಲಾವಣೆ ಮಾಡಲು ಸಹಾಯಕ ಕಂದಾಯ ಅಧಿಕಾರಿಗಳಿಗೆ ಲಾಗಿನ್‌ ವ್ಯವಸ್ಥೆಯನ್ನು ಕಲ್ಪಿಸಲಾಗುವುದು’ ಎಂದು ಹೇಳಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.