ADVERTISEMENT

ದಯಾಮರಣಕ್ಕೆ ರಾಷ್ಟ್ರಪತಿಗೆ ಪತ್ರ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2016, 19:52 IST
Last Updated 21 ಅಕ್ಟೋಬರ್ 2016, 19:52 IST

ಬೆಂಗಳೂರು: ಕೆಲಸದಿಂದ ತೆಗೆದು ಹಾಕಿದ್ದನ್ನು ಖಂಡಿಸಿ ಆಡುಗೋಡಿಯ ಬಾಷ್ ಕಂಪೆನಿ ಎದುರು 432 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕಾರ್ಮಿಕರು, ದಯಾಮರಣ ಕೋರಿ ರಾಷ್ಟ್ರಪತಿ ಅವರಿಗೆ ಶುಕ್ರವಾರ ಪತ್ರ ಬರೆದಿದ್ದಾರೆ.

‘ಸುಮಾರು ವರ್ಷಗಳಿಂದ 263 ಮಂದಿ ಕಂಪೆನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. 2017ರ ಹೊತ್ತಿಗೆ ಎಲ್ಲರನ್ನೂ ಕಾಯಂ ಮಾಡಿಕೊಳ್ಳುವುದಾಗಿ ಕಂಪೆನಿ ಭರವಸೆ ನೀಡಿತ್ತು. ಆದರೆ, 2015ರ ಆಗಸ್ಟ್ 17ರಂದು ಎಲ್ಲರನ್ನೂ ಏಕಾಏಕಿ ಕೆಲಸದಿಂದ ತೆಗೆದು ಹಾಕಿದೆ’ ಎಂದು ಕಾರ್ಮಿಕರು ದೂರಿದರು.

‘ಹಲವು ಬಾರಿ ಮಾತುಕತೆ ನಡೆಸಿದರೂ ಕಂಪೆನಿಯವರು ತಮ್ಮ ನಿಲುವು ಸಡಿಲಿಸುತ್ತಿಲ್ಲ. ಈ ಬಗ್ಗೆ ಪ್ರತಿಭಟನೆ ನಡೆಸಿದರೂ ಪ್ರಯೋಜನವಾಗುತ್ತಿಲ್ಲ. ಅದರಿಂದಾಗಿ ದಯಾಮರಣ ಕೋರಿ ರಾಷ್ಟ್ರಪತಿಯವರಿಗೆ ಪತ್ರ ಬರೆದಿದ್ದೇವೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.   

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.