ADVERTISEMENT

ದುರ್ಗಾಪರಮೇಶ್ವರಿ ದೇವಾಲಯ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2015, 20:25 IST
Last Updated 29 ಮಾರ್ಚ್ 2015, 20:25 IST
ದುರ್ಗಾಪರಮೇಶ್ವರಿ ದೇವಾಸ್ಥಾನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಭಕ್ತಾದಿಗಳು
ದುರ್ಗಾಪರಮೇಶ್ವರಿ ದೇವಾಸ್ಥಾನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಭಕ್ತಾದಿಗಳು   

ಬೆಂಗಳೂರು: ದುರ್ಗಾ ಪರಮೇಶ್ವರಿ ದೇವಾಲಯ ಟ್ರಸ್ಟ್‌  ನಗರದ  ಚಂದ್ರಾ ಲೇಔಟ್‌ನಲ್ಲಿ ನಿರ್ಮಿಸಿರುವ ದುರ್ಗಾ ಪರಮೇಶ್ವರಿ ದೇವಾಲಯದ ಉದ್ಘಾಟನಾ ಕಾರ್ಯಕ್ರಮ  ಭಾನುವಾರ ನಡೆಯಿತು.

ಮಹಾನಗರದಲ್ಲಿ ನಿರ್ಮಾಣಗೊಂಡಿರುವ ಮೊದಲ ದುರ್ಗಾ ಪರಮೇಶ್ವರಿ ದೇವಾಲಯ ಇದಾಗಿದೆ ಎಂದು ಪಾಲಿಕೆ ಸದಸ್ಯ ಹಾಗೂ ದೇವಾಲಯ ಟ್ರಸ್ಟ್‌ನ ಟ್ರಸ್ಟಿ ಕೆ.ಉಮೇಶ್‌ ಶೆಟ್ಟಿ ತಿಳಿಸಿದರು.

‘ಈ ತಾಣವನ್ನು ಪ್ರವಾಸಿ ಹಾಗೂ ಧಾರ್ಮಿಕ ತಾಣವನ್ನಾಗಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಭಕ್ತರಿಗಾಗಿ ಇಲ್ಲಿ ನಿತ್ಯವೂ ಭಜನೆ, ಲಲಿತಸಹಸ್ರ ನಾಮ, ವಿವಿಧ ಬಗೆಯ ಪೂಜೆ ಇನ್ನಿತರ ಕಾರ್ಯಕ್ರಮಗಳನ್ನು  ನಡೆಸಲಾಗುತ್ತದೆ’ ಎಂದು ಹೇಳಿದರು.  ದೇವಾಲಯದಲ್ಲಿ ಮಹಾಚಂಡಿಕಾ ಯಾಗವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಾವಿರಾರು ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.