ADVERTISEMENT

ನಗರದಲ್ಲಿ ಇಂದು ಮಳೆ ಸಂಭವ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2015, 19:47 IST
Last Updated 29 ನವೆಂಬರ್ 2015, 19:47 IST

ಬೆಂಗಳೂರು: ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ಮುಂದಿನ 24 ಗಂಟೆಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು, ನಗರ ಸೇರಿದಂತೆ ಎಂದು ಕೆಲವೆಡೆ ಸಾಧಾರಣ ಮಳೆಯಾಗಲಿದೆ.

‘ವಾಯುಭಾರ ಕುಸಿತದ ಸಾಧ್ಯತೆ ಇದ್ದು, ನಗರ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆ ಬೀಳುವ ಸಾಧ್ಯತೆ ಇರುತ್ತದೆ’ ಎಂದು ಹವಾಮಾನ ಇಲಾಖೆ ನಿರ್ದೇಶಕ ಸುಂದರ್ ಎಂ. ಮೇತ್ರಿ ಅವರು   ತಿಳಿಸಿದರು.

‘ಬೆಂಗಳೂರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದ್ದು, ಎರಡು ದಿನ ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ’  ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.