ADVERTISEMENT

ನೆಲಮಂಗಲದ ಅಂಜಲಿಗೆ ಕಲಾ ಸಂಕ್ರಾಂತಿ ಪುರಸ್ಕಾರ

ಲಲಿತಕಲಾ ಅಕಾಡೆಮಿ: 14 ಚಿತ್ರ ಕಲಾವಿದರಿಗೆ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2017, 19:50 IST
Last Updated 23 ಮಾರ್ಚ್ 2017, 19:50 IST
ಪ್ರಶಸ್ತಿ ಪುರಸ್ಕೃತ ಕಲಾವಿದರೊಂದಿಗೆ ಚಿತ್ರಕಲಾ ಪರಿಷತ್‌ನ ಕಾರ್ಯದರ್ಶಿ ಕಮಲಾಕ್ಷಿ, ಲಲಿತಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷ ಖಂಡೆರಾವ್, ಸಾಹಿತಿ ಕೆ.ಮರುಳಸಿದ್ದಪ್ಪ, ಅಕಾಡೆಮಿಯ ಅಧ್ಯಕ್ಷ ಎಂ.ಎಸ್.ಮೂರ್ತಿ, ಅಕಾಡೆಮಿಯ ಮಾಜಿ ಅಧ್ಯಕ್ಷ ಸಿ.ಚಂದ್ರಶೇಖರ್, ರಿಜಿಸ್ಟ್ರಾರ್ ಇಂದ್ರಮ್ಮ ಇದ್ದಾರೆ
ಪ್ರಶಸ್ತಿ ಪುರಸ್ಕೃತ ಕಲಾವಿದರೊಂದಿಗೆ ಚಿತ್ರಕಲಾ ಪರಿಷತ್‌ನ ಕಾರ್ಯದರ್ಶಿ ಕಮಲಾಕ್ಷಿ, ಲಲಿತಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷ ಖಂಡೆರಾವ್, ಸಾಹಿತಿ ಕೆ.ಮರುಳಸಿದ್ದಪ್ಪ, ಅಕಾಡೆಮಿಯ ಅಧ್ಯಕ್ಷ ಎಂ.ಎಸ್.ಮೂರ್ತಿ, ಅಕಾಡೆಮಿಯ ಮಾಜಿ ಅಧ್ಯಕ್ಷ ಸಿ.ಚಂದ್ರಶೇಖರ್, ರಿಜಿಸ್ಟ್ರಾರ್ ಇಂದ್ರಮ್ಮ ಇದ್ದಾರೆ   
ಬೆಂಗಳೂರು: ಕರ್ನಾಟಕ ಲಲಿತಕಲಾ ಅಕಾಡೆಮಿ ವತಿಯಿಂದ ನಗರದಲ್ಲಿ ಗುರುವಾರ ಆಯೋಜಿಸಿದ್ದ ಸಮಾರಂಭದಲ್ಲಿ ರಾಜ್ಯದ ಚಿತ್ರಕಲಾವಿದೆ ವಿ.ಅಂಜಲಿ ಸೇರಿದಂತೆ ವಿವಿಧ ರಾಜ್ಯಗಳ 14 ಕಲಾವಿದರಿಗೆ ‘ಕಲಾ ಸಂಕ್ರಾಂತಿ ಪುರಸ್ಕಾರ’ವನ್ನು ಪ್ರದಾನ ಮಾಡಲಾಯಿತು.
 
ಬಳ್ಳಾರಿಯ ಶಿವಾನಂದ ಎಚ್‌. ಬಂಟನೂರು ಅವರ ‘ಸಮಕಾಲೀನ ಕನ್ನಡ ದೃಶ್ಯ ಕಲಾ ಸಾಹಿತ್ಯ’ ಕೃತಿಗೂ ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿ ತಲಾ ₹1 ಲಕ್ಷ ನಗದು ಹಾಗೂ ಚಿನ್ನದ ಸ್ಮರಣಿಕೆಯನ್ನು ಒಳಗೊಂಡಿದೆ. ನಿತ್ಯ ರೈಲಿನಲ್ಲಿ ಪ್ರಯಾಣಿಸುವವರ ಸಂಕಷ್ಟದ ಬಗ್ಗೆ ಅಂಜಲಿ ರಚಿಸಿದ್ದ ಕಲಾಕೃತಿಗೆ ಈ ಪ್ರಶಸ್ತಿ ಸಿಕ್ಕಿದೆ.
 
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಮುದ್ದಲಿಂಗನಹಳ್ಳಿಯ ನಿವಾಸಿಯಾದ ಅವರು ಚಿಕ್ಕಂದಿನಲ್ಲೇ ಚಿತ್ರಕಲೆ ಬಗ್ಗೆ ಆಸಕ್ತಿ ಬೆಳೆಸಿಕೊಂಡಿದ್ದರು. ಅವರಿಗೆ ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿಗಳು ಸಂದಿವೆ.

ಅಕಾಡೆಮಿ 50 ವರ್ಷ ಪೂರೈಸಿದ್ದರಿಂದ ರಾಷ್ಟ್ರೀಯ ಕಲಾ ಪ್ರದರ್ಶನ ಆಯೋಜಿಸಲಾಗಿತ್ತು. ಮೊದಲ ಸುತ್ತಿನಲ್ಲಿ 117 ಕಲಾಕೃತಿ, ಅಂತಿಮ ಸುತ್ತಿನಲ್ಲಿ 14 ಕಲಾಕೃತಿಗಳನ್ನು ಈ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿತ್ತು.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.