ಬೆಂಗಳೂರು: ಕೆ.ಆರ್.ಪುರದಲ್ಲಿ ಗುರುವಾರ ಮಾದಕ ವಸ್ತು ಮಾರುತ್ತಿದ್ದ ಆರೋಪದಡಿ ನೈಜೀರಿಯಾದ ಅಮ್ಸೆಲಂ ಚಿಗಾಜೆ ಉಡೆವೊ (32) ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಆತನಿಂದ ₹ 25 ಸಾವಿರ ಮೌಲ್ಯದ ಮಾದಕ ವಸ್ತು, ಪಾಸ್ಪೋರ್ಟ್ ಹಾಗೂ ಮೊಬೈಲ್ ಜಪ್ತಿ ಮಾಡಲಾಗಿದೆ ಎಂದು ಸಿಸಿಬಿ ಅಧಿಕಾರಿ ತಿಳಿಸಿದರು.
‘ವಾಣಿಜ್ಯ ಉದ್ದೇಶದಡಿ ವೀಸಾ ಪಡೆದು ನಗರಕ್ಕೆ ಬಂದಿದ್ದ ಆರೋಪಿ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ನಕಲಿ ಗುರುತಿನ ಚೀಟಿ ಸೃಷ್ಟಿಸಿಕೊಂಡು ವಿದ್ಯಾರ್ಥಿ ಸೋಗಿನಲ್ಲಿ ಈ ಕೃತ್ಯ ಎಸಗುತ್ತಿದ್ದ. ಪರಿಚಯಸ್ಥರಿಂದ ಮಾದಕವಸ್ತು ಖರೀದಿಸುತ್ತಿದ್ದ ಆರೋಪಿ, ಅದನ್ನು ವಿದ್ಯಾರ್ಥಿಗಳು ಹಾಗೂ ಖಾಸಗಿ ಕಂಪೆನಿ ಉದ್ಯೋಗಿಗಳಿಗೆ ಮಾರುತ್ತಿದ್ದ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.