ADVERTISEMENT

ನೊರೆ ಹಾವಳಿ ತಪ್ಪಿಸಲು ಸಿ.ಎಂ ಸೂಚನೆ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2015, 19:50 IST
Last Updated 8 ಅಕ್ಟೋಬರ್ 2015, 19:50 IST
ನೊರೆ ಹಾವಳಿ ತಪ್ಪಿಸಲು ಸಿ.ಎಂ ಸೂಚನೆ
ನೊರೆ ಹಾವಳಿ ತಪ್ಪಿಸಲು ಸಿ.ಎಂ ಸೂಚನೆ   

ಬೆಂಗಳೂರು: ನಗರದ ಬೆಳ್ಳಂದೂರು ಕೆರೆಯಲ್ಲಿ ಉದ್ಭವಿಸಿರುವ ನೊರೆಯ ಸಮಸ್ಯೆಯನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

‘ಬೆಳ್ಳಂದೂರು ಕೆರೆಯಲ್ಲಿ ಒಂದೆಡೆ ನೊರೆ ಹಾಗೂ ಮತ್ತೊಂದೆಡೆ ದುರ್ನಾತ ಹೆಚ್ಚಿ ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತಿವೆ’ ಎಂದು ಸಾಮಾಜಿಕ ಜಾಲ ತಾಣದಲ್ಲಿ ಗುರುವಾರ ದಾಖಲಾದ ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿ ಅವರು ಈ ಕ್ರಮ ಕೈಗೊಂಡಿದ್ದಾರೆ.

ಪಾಲಿಕೆಯ ಆಯುಕ್ತ ಜಿ. ಕುಮಾರ್ ನಾಯಕ್ ಅವರಿಗೆ ದೂರವಾಣಿ ಮೂಲಕ ಮಾತನಾಡಿದ ಅವರು, ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ವೈಯಕ್ತಿಕವಾಗಿ ಗಮನಹರಿಸಿ ಸಮಸ್ಯೆಯನ್ನು ಬಗೆಹರಿಸಬೇಕು. ಅಲ್ಲದೆ ಕಾರ್ಯಪಾಲನಾ ವರದಿ ಸಲ್ಲಿಸಬೇಕು ಎಂದು ಸೂಚನೆ ನೀಡಿದ್ದಾರೆ.

‘ನೊರೆ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ಕೈಗೊಳ್ಳಬಹುದಾದ ದೀರ್ಘಕಾಲಿಕ ಕ್ರಮಗಳ ಕುರಿತಂತೆ ಅಧಿಕಾರಿಗಳ ಸಭೆ ಕರೆದು ಚರ್ಚಿಸಲಿದ್ದೇನೆ’ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.