ADVERTISEMENT

ನೋಟಿಸ್ ಜಾರಿಗೆ ಆದೇಶ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2016, 19:45 IST
Last Updated 21 ಅಕ್ಟೋಬರ್ 2016, 19:45 IST

ಬೆಂಗಳೂರು: ಹಿರಿಯ ರಾಜಕಾರಣಿ ಜಿ. ಮಾದೇಗೌಡ ಅವರಿಗೆ ಸೇರಿದ ಭಾರತಿ ಎಜುಕೇಷನ್ ಟ್ರಸ್ಟ್‌ಗೆ ಮಂಜೂರು ಮಾಡಿದ್ದ ಜಮೀನನ್ನು ಮಾರಾಟ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಲು ಹೈಕೋರ್ಟ್‌  ಆದೇಶಿಸಿದೆ.

ಈ ಸಂಬಂಧ ಮದ್ದೂರು ತಾಲ್ಲೂಕಿನ ದೊಡ್ಡರಸಿನಕೆರೆ ನಿವಾಸಿ ಡಿ.ಕೆ.ಕೃಷ್ಣ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯ
ಮೂರ್ತಿ ಎಸ್‌.ಕೆ.ಮುಖರ್ಜಿ ಹಾಗೂ ನ್ಯಾಯಮೂರ್ತಿ ಆರ್‌.ಬಿ.ಬೂದಿಹಾಳ್‌ ಅವರಿದ್ದ ವಿಭಾಗೀಯ ಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಮಾದೇಗೌಡ ಅವರಿಗೆ ಸೇರಿದ ಭಾರತಿ ಎಜುಕೇಷನ್ ಟ್ರಸ್ಟ್‌ಗೆ  ರಾಜ್ಯ ಸರ್ಕಾರ 1962ರಲ್ಲಿ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕರಡಕೆರೆ, ಸಬ್ಬನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಒಟ್ಟು 93 ಎಕರೆ 26 ಗುಂಟೆ ಜಾಗ ಮಂಜೂರು ಮಾಡಿತ್ತು. ಇದನ್ನು ಸಾರ್ವಜನಿಕ ಹಾಗೂ ಶೈಕ್ಷಣಿಕ ಉದ್ದೇಶಕ್ಕೆ ಮಾತ್ರ ಬಳಸಬೇಕು. ಯಾರಿಗೂ ಹಸ್ತಾಂತರ ಅಥವಾ ಮಾರಾಟ ಮಾಡಬಾರದು ಎಂದು  ಷರತ್ತು ವಿಧಿಸಲಾಗಿತ್ತು. ಆದರೆ  ಷರತ್ತು ಉಲ್ಲಂಘಿಸಿ 25 ಎಕರೆ ಮಾರಾಟ ಮಾಡಲಾಗಿದೆ ಎಂಬುದು ಅರ್ಜಿದಾರರ ಆರೋಪ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT