ADVERTISEMENT

ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2018, 19:32 IST
Last Updated 21 ಮಾರ್ಚ್ 2018, 19:32 IST

ಬೆಂಗಳೂರು: ಯುಬಿ ಸಿ.ಟಿ.ಯಲ್ಲಿ ವಿದ್ವತ್‌ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಜೈಲು ಸೇರಿರುವ ಮೊಹಮದ್‌ ನಲಪಾಡ್‌ ಹಾಗೂ ಆತನ ಸಹಚರರ ನ್ಯಾಯಾಂಗ ಬಂಧನದ ಅವಧಿಯನ್ನು ಏಪ್ರಿಲ್ 4ರವರೆಗೆ ವಿಸ್ತರಣೆ ಮಾಡಲಾಗಿದೆ.

ಪ್ರಕರಣದ ವಿಚಾರಣೆಯನ್ನು ಬುಧವಾರ ಕೈಗೆತ್ತಿಕೊಂಡಿದ್ದ ನಗರದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ, ಅವಧಿಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿತು. ವಿಡಿಯೊ ಕಾನ್ಫರೆನ್ಸ್ ಮೂಲಕ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಜಾಮೀನು ಕೋರಿ ನಲಪಾಡ್‌ ಹಾಗೂ ಆತನ ಸ್ನೇಹಿತರು ಸಲ್ಲಿಸಿದ್ದ ಅರ್ಜಿಯನ್ನು ಸ್ಥಳೀಯ ನ್ಯಾಯಾಲಯ ಹಾಗೂ ಹೈಕೋರ್ಟ್‌ ಈಗಾಗಲೇ ತಿರಸ್ಕರಿಸಿವೆ. ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲು ಆರೋಪಿಗಳು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಅದಕ್ಕೆ ಪ್ರತಿಯಾಗಿ ಆಕ್ಷೇಪಣೆ ಸಲ್ಲಿಸುವುದಾಗಿ ವಿದ್ವತ್‌ ಪರ ವಾದಿಸುತ್ತಿರುವ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್‌ ಶ್ಯಾಮಸುಂದರ್‌ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.