ADVERTISEMENT

‘ನ್ಯಾಯಾಲಯಗಳಲ್ಲಿ ಕನ್ನಡ ಬಳಕೆ ಹೆಚ್ಚಲಿ’

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2017, 20:04 IST
Last Updated 22 ಆಗಸ್ಟ್ 2017, 20:04 IST
‘ನ್ಯಾಯಾಲಯಗಳಲ್ಲಿ ಕನ್ನಡ ಬಳಕೆ ಹೆಚ್ಚಲಿ’
‘ನ್ಯಾಯಾಲಯಗಳಲ್ಲಿ ಕನ್ನಡ ಬಳಕೆ ಹೆಚ್ಚಲಿ’   

ಬೆಂಗಳೂರು: ‘ಹೈಕೋರ್ಟ್‌ ಹಾಗೂ ಜಿಲ್ಲಾ ನ್ಯಾಯಾಲಯಗಳಲ್ಲಿ ಇಂಗ್ಲಿಷ್‌ ಭಾಷೆ ಪ್ರಧಾನವಾಗಿ ಬಳಕೆಯಾಗುತ್ತಿದೆ. ಅಂತಹ ಸ್ಥಳಗಳಲ್ಲಿ ಕನ್ನಡ ಭಾಷೆಯನ್ನು ಬಳಕೆ ಮಾಡುವಂತೆ ಒತ್ತಾಯಿಸಬೇಕು’ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್‌.ಜಿ.ಸಿದ್ಧರಾಮಯ್ಯ ಹೇಳಿದರು.

ಬ್ಯಾಟರಾಯನಪುರ ಬಳಿಯ ಕೆಂಪಾಪುರದ ಸಿಂಧಿ ವಾಣಿಜ್ಯ ಕಾಲೇಜಿನ ಕನ್ನಡ ವಿಭಾಗದ ನಿರಂತರ ಸಾಹಿತ್ಯ ವೇದಿಕೆ ಹಾಗೂ ಸಿಂಧಿ ಸೇವಾ ಸಮಿತಿಯ ಆಶ್ರಯದಲ್ಲಿ ಆಯೋಜಿಸಿದ್ದ ‘ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿಗಳ ಬದುಕು–ಬರಹ ಕುರಿತ ಉಪನ್ಯಾಸ ಮಾಲೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ನ್ಯಾಯಾಲಯಗಳಲ್ಲಿ ಕನ್ನಡ ಭಾಷೆಯ ಬಳಕೆಗೆ ಉತ್ತೇಜನ ನೀಡಬೇಕು. ನ್ಯಾಯಾಧೀಶರು, ವಕೀಲರು ಕನ್ನಡ ಬಳಕೆ ಮಾಡಬೇಕು’ ಎಂದು ಒತ್ತಾಯಿಸಿದರು.

ADVERTISEMENT

‘ತಮಿಳುನಾಡಿನಲ್ಲಿ ದ್ವಿಭಾಷಾ ನೀತಿಗೆ ಒತ್ತು ನೀಡಲಾಗಿದೆ. ಆದರೆ, ನಮ್ಮ ರಾಜ್ಯದಲ್ಲಿ ತ್ರಿಭಾಷಾ ನೀತಿ ಜಾರಿಯಲ್ಲಿದೆ. ಇದರಿಂದಲೇ ಹಿಂದಿ ಹೇರಿಕೆ ಮಾಡಲಾಗುತ್ತಿದೆ. ದ್ವಿಭಾಷಾ ನೀತಿ ಜಾರಿಗಾಗಿ ಕನ್ನಡಿಗರು ಒಕ್ಕೊರಲಿನಿಂದ ಆಗ್ರಹಿಸಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.