ADVERTISEMENT

ಪಂಕ್ತಿಭೇದ ವಿರೋಧಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2014, 19:30 IST
Last Updated 24 ಏಪ್ರಿಲ್ 2014, 19:30 IST
ಉಡುಪಿಯ ಕೃಷ್ಣ ದೇವಾಲಯದಲ್ಲಿ ಪಂಕ್ತಿಭೇದದ ಹೆಸರಿನಲ್ಲಿ  ನಡೆಯುತ್ತಿರುವ ಅಮಾನವೀಯ ಆಚರಣೆ ನಿಲ್ಲಬೇಕು ಹಾಗೂ ದೇವಾಲಯವನ್ನು ಮುಜರಾಯಿ ಇಲಾಖೆಗೆ ವಹಿಸಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಮಹಿಳಾ ಒಕ್ಕೂಟದ ಸದಸ್ಯರು ನಗರದ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು

ಬೆಂಗಳೂರು: ಉಡುಪಿಯ ಕೃಷ್ಣ ದೇವಾಲಯದಲ್ಲಿ ಪಂಕ್ತಿಭೇದದ ಹೆಸರಿನಲ್ಲಿ  ನಡೆಯುತ್ತಿರುವ ಅಮಾನವೀಯ ಆಚರಣೆ ನಿಲ್ಲಬೇಕು ಹಾಗೂ ದೇವಾಲಯವನ್ನು ಮುಜರಾಯಿ ಇಲಾಖೆಗೆ ವಹಿಸಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಮಹಿಳಾ ಒಕ್ಕೂಟದ ಸದಸ್ಯರು ನಗರದ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಒಕ್ಕೂಟದ ಸದಸ್ಯೆ ಇಂದಿರಾ ಕೃಷ್ಣಪ್ಪ, ‘ಇತ್ತೀಚೆಗೆ ಕೃಷ್ಣ ದೇವಾಲಯದಲ್ಲಿ ಉಪನ್ಯಾಸಕಿ ವನಿತಾ ಶೆಟ್ಟಿ ಎಂಬುವರನ್ನು ಊಟದ ಪಂಕ್ತಿಯಿಂದ ಅಮಾನವೀಯವಾಗಿ ಹೊರದಬ್ಬಲಾಗಿದೆ. ಇದು ಮಾನವೀಯತೆ ಹಾಗೂ ಮಹಿಳೆಯರ ಮೇಲಾದ ದೌರ್ಜನ್ಯ ’ ಎಂದರು.

ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ ಮಾತನಾಡಿ, ‘ಮಹಿಳೆಯರ ಮೇಲೆ ನಿರಂತರವಾಗಿ ದೌರ್ಜನ್ಯ, ದಬ್ಬಾಳಿಕೆ ನಡೆಯುತ್ತಲೇ ಇದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.