ADVERTISEMENT

ಪಂಚತಾರಾ ಹೋಟೆಲ್‌ಗಳಲ್ಲಿ ಕಬಾಲಿ ಚಿತ್ರ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ

​ಪ್ರಜಾವಾಣಿ ವಾರ್ತೆ
Published 20 ಜುಲೈ 2016, 19:30 IST
Last Updated 20 ಜುಲೈ 2016, 19:30 IST

ಬೆಂಗಳೂರು: ನಗರದ ಪಂಚತಾರಾ (5 ಸ್ಟಾರ್‌) ಹೋಟೆಲ್‌ಗಳಲ್ಲಿ ‘ಕಬಾಲಿ’ ಚಲನಚಿತ್ರ ಪ್ರದರ್ಶನಕ್ಕೆ ನಗರ ಜಿಲ್ಲಾಡಳಿತ ಅನುಮತಿ ನಿರಾಕರಿಸಿದೆ.
ಇದೇ 22ರಿಂದ 24ರ ವರೆಗೆ ನಾಲ್ಕು ಪಂಚತಾರಾ ಹೋಟೆಲ್‌ಗಳಲ್ಲಿ ಚಿತ್ರ ಪ್ರದರ್ಶನಕ್ಕೆ ಅನುಮತಿ ನೀಡಬೇಕು ಎಂದು ‘ಲಹರಿ’ ಸಂಸ್ಥೆ ಬುಧವಾರ ಜಿಲ್ಲಾಡಳಿತಕ್ಕೆ ಮನವಿ ಮಾಡಿತ್ತು.

‘ಚಲನಚಿತ್ರ ಮಂದಿರ ಹಾಗೂ ಮಲ್ಟಿಫ್ಲೆಕ್ಸ್‌ಗಳನ್ನು ಮಾತ್ರ ಚಿತ್ರ ಪ್ರದರ್ಶನ ಮಾಡಬಹುದು. ಕರ್ನಾಟಕ ಸಿನೆಮಾ ಕಾಯ್ದೆ ಪ್ರಕಾರ, ಚಿತ್ರಮಂದಿರದ ಪರವಾನಗಿ ಇಲ್ಲದೇ,  ಚಿತ್ರಪ್ರದರ್ಶನ ನಡೆಸಲು ಬರುವುದಿಲ್ಲ’ ಎಂದು ಜಿಲ್ಲಾಧಿಕಾರಿ ವಿ.ಶಂಕರ್‌ ಅವರು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.