ADVERTISEMENT

ಪತ್ನಿ ಕೊಲೆ: ಅಪರಾಧಿ ಪತಿಗೆ ಜೀವಾವಧಿ ಶಿಕ್ಷೆ ಕಾಯಂ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2017, 19:54 IST
Last Updated 7 ಡಿಸೆಂಬರ್ 2017, 19:54 IST

ಬೆಂಗಳೂರು: ಕೌಟುಂಬಿಕ ಕಲಹದ ಕಾರಣಕ್ಕಾಗಿ ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಚಂದಾಪುರದ ನೆರಳೂರು ನಿವಾಸಿ ಟಿ.ಎಂ. ನಾಗೇಶ್‌ಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್‌ ಕಾಯಂಗೊಳಿಸಿದೆ.

ಶಿಕ್ಷೆ ರದ್ದುಪಡಿಸುವಂತೆ ಕೋರಿ ಅಪರಾಧಿ ನಾಗೇಶ್ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ರವಿ ಮಳಿಮಠ ಮತ್ತು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

‘ಸವಿತಾ ಮತ್ತು ನಾಗೇಶ್‌ 2005ರಲ್ಲಿ ಮದುವೆಯಾಗಿದ್ದರು. ಮದುವೆಯಾದ ಕೆಲವೇ ತಿಂಗಳಿನಲ್ಲಿ ನಾಗೇಶ್‌ ಮತ್ತೊಂದು ಮದುವೆಯಾಗಿದ್ದ. ಈ ವಿಚಾರದಲ್ಲಿ ದಂಪತಿ ನಡುವೆ ಕಲಹ ನಡೆದ ಕಲಹದಲ್ಲಿ ನಾಗೇಶ್, ಸವಿತಾ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ’ ಎಂದು ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡಿದ್ದರು.

ADVERTISEMENT

ಪ್ರಕರಣದ ವಿಚಾರಣೆ ನಡೆಸಿದ್ದ ನಗರ ಪ್ರಧಾನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನಾಯಾಲಯ 2012ರ ಏಪ್ರಿಲ್‌ನಲ್ಲಿ ಶಿಕ್ಷೆ ವಿಧಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.