ADVERTISEMENT

ಪಶು ಆರೋಗ್ಯ ತಪಾಸಣಾ ಶಿಬಿರ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2016, 19:30 IST
Last Updated 20 ಅಕ್ಟೋಬರ್ 2016, 19:30 IST
ಶಿಬಿರದಲ್ಲಿ ಹಸುಗಳ ಆರೋಗ್ಯ ತಪಾಸಣೆ ನಡೆಸಲಾಯಿತು
ಶಿಬಿರದಲ್ಲಿ ಹಸುಗಳ ಆರೋಗ್ಯ ತಪಾಸಣೆ ನಡೆಸಲಾಯಿತು   

ಹೊಸಕೋಟೆ: ತಾಲ್ಲೂಕಿನ ಕುರುಬರಹಳ್ಳಿಯಲ್ಲಿ ಗುರುವಾರ ಪಶು ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಆಯೋಜಿಸಲಾಗಿತ್ತು.

ಕೃಷಿ ಸಚಿವ ಕೃಷ್ಣಬೈರೇಗೌಡ ಮಾತನಾಡಿ, ‘ಹಸುಗಳಲ್ಲಿ ಹೆಣ್ಣು ಸಂತಾನ ಹೆಚ್ಚಿಸುವ ಸಂಬಂಧ ಪ್ರಯೋಗಗಳು ನಡೆದಿದ್ದು, ಇನ್ನೆರಡು ತಿಂಗಳಲ್ಲಿ ಹೊಸ ಯೋಜನೆ ಅನುಷ್ಠಾನಕ್ಕೆ ತರಲಾಗುತ್ತದೆ’ ಎಂದರು.

‘ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಹೈನುಗಾರಿಕೆಯಲ್ಲಿ ಆರ್ಥಿಕ ಸ್ವಾವಲಂಬನೆ ಸಾಧಿಸಬೇಕು. ಆದರೆ, ರೈತರು ಈ ಬಗ್ಗೆ ಆಸಕ್ತಿ ತೋರಿಸುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ವಿ.ಪ್ರಸಾದ್ ಮಾತನಾಡಿ, ‘ತಾಲ್ಲೂಕಿನ ಕುರುಬರಹಳ್ಳಿ, ಸಮೇತನಹಳ್ಳಿ ಮತ್ತು ನೆಲವಾಗಿಲು ಗ್ರಾಮಗಳಲ್ಲಿ ಪಶು ಆಸ್ಪತ್ರೆ ಸ್ಥಾಪನೆ ಹಾಗೂ ಹೊಸಕೋಟೆಯಲ್ಲಿ ಪ್ರಯೋಗ ಶಾಲೆ ಸ್ಥಾಪಿಸಲು ಸರ್ಕಾರಕ್ಕೆ ಮನವಿ ಮಾಡಲಾಗಿದೆ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT