ADVERTISEMENT

ಪಿಇಎಸ್‌ ವಿವಿ: ಬಿ.ಟೆಕ್‌ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ

​ಪ್ರಜಾವಾಣಿ ವಾರ್ತೆ
Published 24 ಮೇ 2017, 20:04 IST
Last Updated 24 ಮೇ 2017, 20:04 IST

ಬೆಂಗಳೂರು: ಪಿಇಎಸ್‌ ವಿಶ್ವವಿದ್ಯಾಲಯ ಪ್ರಸಕ್ತ ಸಾಲಿನ ಬಿ.ಟೆಕ್‌ ಪ್ರವೇಶಕ್ಕೆ ದೇಶದಾದ್ಯಂತ ನಡೆಸಿದ್ದ  ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದೆ.

ಬೆಂಗಳೂರಿನ ವಿದ್ಯಾರ್ಥಿಗಳು ಕ್ರಮವಾಗಿ 1ರಿಂದ 10 ರ್‍ಯಾಂಕ್‌ ಪಡೆದುಕೊಂಡಿದ್ದಾರೆ. ರ್‍ಯಾಂಕ್‌ ಪಡೆದ ವಿದ್ಯಾರ್ಥಿಗಳ ಪಟ್ಟಿಯನ್ನು ಪಿಇಎಸ್‌ ವಿಶ್ವವಿದ್ಯಾಲಯದ ಕುಲಪತಿ ಎಂ.ಆರ್‌.ದೊರೆಸ್ವಾಮಿ ಬುಧವಾರ ಬಿಡುಗಡೆ ಮಾಡಿದರು.

ಕನಕಪುರ ರಸ್ತೆಯ ಶ್ರೀ ಕುಮಾರನ್‌ ಚಿಲ್ಡ್ರನ್ಸ್‌ ಹೋಮ್‌ನ ವಿದ್ಯಾರ್ಥಿ ನಿಖಿಲ್‌ ಕುಮಾರ್‌ 1ನೇ ರ್‍ಯಾಂಕ್‌, ಯಲಹಂಕ ನ್ಯೂಟೌನ್‌ ಚೇತನ ಪಿ.ಯು ಕಾಲೇಜಿನ ಅರಧ್‌ ಬಿಸಾರ್ಯ 2ನೇ ರ್‍ಯಾಂಕ್‌ ಹಾಗೂ ತಲಘಟ್ಟಪುರದ ದೀಕ್ಷಾ ಸೆಂಟರ್‌ ಫಾರ್‌ ಲರ್ನಿಂಗ್‌ ಪಿ.ಯು ಕಾಲೇಜಿನ ವಿದ್ಯಾರ್ಥಿ ಧ್ರುವ ಶ್ರೀರಾಮ್‌ 3ನೇ ರ್‍ಯಾಂಕ್‌ ಪಡೆದಿದ್ದಾರೆ.

ADVERTISEMENT

ಬಿ.ಟೆಕ್‌ (ಸಿ.ಎಸ್‌.ಇ, ಇ.ಸಿ.ಇ, ಎಂ.ಇ, ಇ.ಇ.ಇ, ಸಿ.ಇ ಮತ್ತು ಬಿ.ಟಿ) ಕೋರ್ಸ್‌ ಪ್ರವೇಶಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಜೂನ್‌ 3 ಮತ್ತು 4ರಂದು ಮೊದಲ ಸುತ್ತಿನ ಕೌನ್ಸೆಲಿಂಗ್‌ ನಡೆಸಲಾಗುವುದು. ದೇಶದ 34 ಕೇಂದ್ರಗಳಲ್ಲಿ 15 ಸಾವಿರ ವಿದ್ಯಾರ್ಥಿಗಳು ‘ಪಿಇಎಸ್‌ಎಸ್‌ಎಟಿ–2017’ ಪ್ರವೇಶ ಪರೀಕ್ಷೆ ಬರೆದಿದ್ದರು. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಪ್ರವೇಶ ಪರೀಕ್ಷೆಗೆ ಹಾಜರಾದವರ ಸಂಖ್ಯೆ ಹೆಚ್ಚಿತ್ತು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.