ADVERTISEMENT

ಪುಸ್ತಕ ವೀಕ್ಷಣೆಗೆ ಮುಗಿಬಿದ್ದ ಜನ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2014, 20:09 IST
Last Updated 7 ಡಿಸೆಂಬರ್ 2014, 20:09 IST
ಪುಸ್ತಕ ವೀಕ್ಷಣೆಗೆ ಮುಗಿಬಿದ್ದ ಜನ
ಪುಸ್ತಕ ವೀಕ್ಷಣೆಗೆ ಮುಗಿಬಿದ್ದ ಜನ   

ಬೆಂಗಳೂರು: ಅಲ್ಲಿ ಹೆಚ್ಚಿನ  ಸಂಖ್ಯೆ ಯಲ್ಲಿ ವಿದ್ಯಾರ್ಥಿಗಳು,  ಸಾಹಿತ್ಯಾ ಸಕ್ತರು ಹಾಗೂ ಸಾರ್ವಜನಿಕರು  ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದರು. ವೇದಿಕೆಯಲ್ಲಿ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಣ್ತುಂಬಿ ಕೊಳ್ಳುವ ಜೊತೆಗೆ ಪುಸ್ತಕಗಳನ್ನು ವೀಕ್ಷಿಸಲು ಮುಗಿಬೀಳುತ್ತಿದ್ದರು

–ಈ ದೃಶ್ಯಗಳು ಕಂಡುಬಂದಿದ್ದು ಸೃಷ್ಟಿ ವೆಂಚರ್ಸ್‌ ವತಿಯಿಂದ  ಜಯ ನಗರ ನ್ಯಾಷನಲ್‌ ಕಾಲೇಜು ಮೈದಾನ ದಲ್ಲಿ ಏರ್ಪಡಿಸಿರುವ ಏಳನೇ ಪುಸ್ತಕ ಪರಿಷೆಯಲ್ಲಿ. ಕಲೆ, ಸಾಹಿತ್ಯ, ವಿಜ್ಞಾನ, ವೈಚಾರಿಕತೆ, ವಿಮರ್ಶೆ ಸೇರಿದಂತೆ ವಿವಿಧ ಬಗೆಯ ಪುಸ್ತಕಗಳನ್ನು ಜನರು ವೀಕ್ಷಿಸಿದರು.   ಮಕ್ಕಳು ಪಠ್ಯಕ್ಕೆ ಸಂಬಂಧಿ ಸಿದ ಪುಸ್ತಕಗಳ ವೀಕ್ಷಣೆಯಲ್ಲಿ ತಲ್ಲೀನ ರಾಗಿದ್ದುದು ಕಂಡು ಬಂತು. ಪರಿಷೆಗೆ ಬಂದಿದ್ದ ಪ್ರತಿಯೊಬ್ಬರಿಗೂ ಒಂದು ಪುಸ್ತಕವನ್ನು ಉಚಿತವಾಗಿ ನೀಡ ಲಾಯಿತು.

ಪರಿಷೆಗೆ ಚಾಲನೆ ನೀಡಿ ಮಾತನಾಡಿದ ಹಿರಿಯ ಸಾಹಿತಿ ಡಾ. ಚಂದ್ರಶೇಖರ ಕಂಬಾರ, ‘ಆಯಾ ರಾಜ್ಯಗಳಲ್ಲಿ ಅಲ್ಲಿನ ಮಾತೃಭಾಷೆ ಶಿಕ್ಷಣ ಮಾಧ್ಯಮವಾಗಬೇಕು. ಪ್ರಾಥ ಮಿಕ ಮತ್ತು ಮಾಧ್ಯಮಿಕ ಶಿಕ್ಷಣವನ್ನು ರಾಷ್ಟ್ರೀಕರಣಗೊಳಿಸಿದಾಗ ಮಾತ್ರ ಭಾಷಾ ಮಾಧ್ಯಮಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಸಲು ಸಾಧ್ಯ’ ಎಂದರು.

ರಾಜ್ಯಗಳಲ್ಲಿ ಮಾತೃ ಭಾಷೆಯನ್ನು ಶಿಕ್ಷಣ ಮಾಧ್ಯಮವನ್ನಾಗಿ ಮಾಡುವ ಬಗ್ಗೆ ಕೇಂದ್ರ ಸಾಹಿತ್ಯ ಅಕಾಡೆಮಿಯು ಸಹಿ ಸಂಗ್ರಹ ಅಭಿಯಾನವನ್ನು ಆರಂಭಿಸಿದೆ. ಗುಜರಾತ್‌, ಮಹಾರಾಷ್ಟ್ರ ಹಾಗೂ ಪಶ್ಚಿಮ ಬಂಗಾಳಗಳಲ್ಲಿ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕನ್ನಡಿಗರು ಈ ಅಭಿಯಾನಕ್ಕೆ ಪ್ರೋತ್ಸಾಹ ನೀಡಬೇಕು ಎಂದರು.

ಜನರಲ್ಲಿ ಇಂಗ್ಲಿಷ್‌ ವ್ಯಾಮೋಹ ಹೆಚ್ಚುತ್ತಿದೆ. ಇಂಗ್ಲಿಷ್‌ ಶಿಕ್ಷಣದಿಂದಾಗಿ ಮಕ್ಕಳಲ್ಲಿ ಸೃಜನಶೀಲತೆ ಮರೆ ಯಾಗುತ್ತದೆ ಎಂದು ಹೇಳಿದರು.
ಕವಿ ಸಿದ್ದಲಿಂಗಯ್ಯ ಮಾತನಾಡಿ, ‘ಈ ರೀತಿ ದೊಡ್ಡಮಟ್ಟದ ಪುಸ್ತಕ ಪರಿಷೆ ಯಾವ ರಾಜ್ಯಗಳಲ್ಲಿಯೂ  ನಡೆ ಯುತ್ತಿಲ್ಲ. ಪೋಷಕರು ಹಾಗೂ ವಿದ್ಯಾರ್ಥಿಗಳು ಈ ಅವಕಾಶವನ್ನು  ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಪ್ರಧಾನಿಗಳಿಗೆ ಮನವರಿಕೆ ಮಾಡ ಲಾಗುವುದು: ‘ಭಾಷಾ ಮಾಧ್ಯಮಕ್ಕೆ ಸಂಬಂಧಸಿದಂತೆ ಮುಖ್ಯಮಂತ್ರಿ ಗಳೊಂದಿಗೆ ಈಗಾಗಲೆ ಚರ್ಚೆ ನಡೆಸಿದ್ದೇನೆ. ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಲು ರಾಜ್ಯದಿಂದ ನಿಯೋಗ ಕರೆದುಕೊಂಡು ಬರುವಂತೆ ಹೇಳಲಾಗಿದೆ. ಅಲ್ಲದೇ, ಎಲ್ಲ ಸಂಸದರೊಂದಿಗೆ ಸೇರಿ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸ ಲಾಗುವುದು. ರಾಜ್ಯಗಳಲ್ಲಿ ಮಾತೃ ಭಾಷೆಯನ್ನು ಶಿಕ್ಷಣ ಮಾಧ್ಯಮವನ್ನಾಗಿ ಮಾಡುವ ಬಗ್ಗೆ ಮನವರಿಕೆ ಮಾಡಿ ಕೊಡ ಲಾಗುದು’ ಎಂದು ಕೇಂದ್ರ ಸಚಿವ ಅನಂತ ಕುಮಾರ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.