ADVERTISEMENT

‘ಪೌರ ಕಾರ್ಮಿಕರ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಕೋಟಾ’

​ಪ್ರಜಾವಾಣಿ ವಾರ್ತೆ
Published 20 ಜನವರಿ 2017, 20:06 IST
Last Updated 20 ಜನವರಿ 2017, 20:06 IST
ಆಂಜನೇಯ
ಆಂಜನೇಯ   

ಬೆಂಗಳೂರು: ಪ್ರತಿಷ್ಠಿತ ಶಾಲೆಗಳಲ್ಲಿ ಪೌರ ಕಾರ್ಮಿಕರ ಮಕ್ಕಳಿಗೆ ಪ್ರತ್ಯೇಕ ಕೋಟಾ ಕಲ್ಪಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ತಿಳಿಸಿದ್ದಾರೆ.

ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಶೇಷವಾಗಿ ವಸತಿ ಸೌಲಭ್ಯ ಹೊಂದಿರುವ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರತ್ಯೇಕ ಕೋಟಾ ಕಲ್ಪಿಸುವ ಉದ್ದೇಶ ಇದೆ ಎಂದು ಅವರು ಹೇಳಿದರು.

ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿ ಪೌರ ಕಾರ್ಮಿಕರ ಮಕ್ಕಳಿಗೆ ಪ್ರತ್ಯೇಕ ಕೋಟಾ (ಸಬ್‌ ಕೋಟಾ) ನೀಡುವ ಪ್ರಸ್ತಾವ ಇದೆ.  ಮುಖ್ಯಮಂತ್ರಿ ಫೆ. 3 ರಂದು ಕರೆದಿರುವ ಸಭೆಯಲ್ಲಿ ಈ ಸಂಬಂಧ ಚರ್ಚಿಸಲಾಗುವುದು ಎಂದರು. ಇದೇ ಸಭೆಯಲ್ಲಿ ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸುವುದೂ ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುವುದು. ಸಭೆಯಲ್ಲಿ  ಸಮಾಜ ಕಲ್ಯಾಣ ಇಲಾಖೆ, ಹಣಕಾಸು ಇಲಾಖೆ, ಶಿಕ್ಷಣ ಮತ್ತು ನಗರಾಭಿವೃದ್ಧಿ ಇಲಾಖೆಗಳ ಅಧಿಕಾರಿಗಳು ಭಾಗವಹಿಸುವರು ಎಂದು ಆಂಜನೇಯ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.