ADVERTISEMENT

‘ಪ್ರಜಾವಾಣಿ–ಡೆಕ್ಕನ್‌ ಹೆರಾಲ್ಡ್‌’ ಜನಸ್ಪಂದನ ಇಂದು

ವಿಜಯನಗರ ವಿಧಾನಸಭಾ ಕ್ಷೇತ್ರ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2017, 19:37 IST
Last Updated 17 ಫೆಬ್ರುವರಿ 2017, 19:37 IST
‘ಪ್ರಜಾವಾಣಿ–ಡೆಕ್ಕನ್‌ ಹೆರಾಲ್ಡ್‌’ ಜನಸ್ಪಂದನ ಇಂದು
‘ಪ್ರಜಾವಾಣಿ–ಡೆಕ್ಕನ್‌ ಹೆರಾಲ್ಡ್‌’ ಜನಸ್ಪಂದನ ಇಂದು   
ಬೆಂಗಳೂರು: ವಿಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್‌ಗಳ ಕುಂದು ಕೊರತೆಗಳಿಗೆ ಪರಿಹಾರ ಕಂಡುಕೊಳ್ಳಲು ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ‘ಪ್ರಜಾವಾಣಿ ’ ಮತ್ತು ‘ಡೆಕ್ಕನ್‌ ಹೆರಾಲ್ಡ್‌’ ಪತ್ರಿಕೆಗಳ ಆಶ್ರಯದಲ್ಲಿ ಶನಿವಾರ ‘ಜನಸ್ಪಂದನ–ಸಿಟಿಜನ್ಸ್‌ ಫಾರ್‌ ಚೇಂಜ್‌’ ಕಾರ್ಯಕ್ರಮ ಏರ್ಪಡಿಸಲಾಗಿದೆ.
 
ಹಂಪಿನಗರ ಬಸ್‌ನಿಲ್ದಾಣದ ಬಳಿಯ  ಚಂದ್ರಶೇಖರ ಆಜಾದ್‌ ಆಟದ ಮೈದಾನದಲ್ಲಿ   ಬೆಳಿಗ್ಗೆ 9ರಿಂದ ಮಧ್ಯಾಹ್ನ 1 ಗಂಟೆವರೆಗೆ ಜನಸ್ಪಂದನ ನಡೆಯಲಿದೆ. 
ಸಚಿವ ಎಂ.ಕೃಷ್ಣಪ್ಪ, ಕ್ಷೇತ್ರದ ವಿವಿಧ  ವಾರ್ಡ್‌ಗಳ ಪಾಲಿಕೆ ಸದಸ್ಯರು, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ, ಬೆಸ್ಕಾಂ, ಜಲಮಂಡಳಿ ಹಾಗೂ ಪೊಲೀಸ್‌ ಇಲಾಖೆ ಅಧಿಕಾರಿಗಳು  ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 
 
ಕಸ ವಿಲೇವಾರಿ, ಕುಡಿಯುವ ನೀರು ಪೂರೈಕೆ, ರಸ್ತೆ ಸುರಕ್ಷತೆ,  ಉದ್ಯಾನಗಳಿಗೆ ಸಂಬಂಧಿಸಿದ ಕುಂದುಕೊರತೆಗಳ ಬಗ್ಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬಹುದು. ವಾರ್ಡ್‌ನ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲು ಇಚ್ಛಿಸುವವರು  ಬೆಳಿಗ್ಗೆ 8.30ರಿಂದ 9.30ರವರೆಗೆ ಸ್ಥಳದಲ್ಲೇ ಹೆಸರು ನೋಂದಾಯಿಸಬಹುದು.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.