ADVERTISEMENT

ಪ್ರತಿಭಟನೆ ಹಿಂಪಡೆದ ಸಿಬ್ಬಂದಿ; ಮೆಟ್ರೊ ರೈಲು ಸಂಚಾರ ಪುನರಾರಂಭ

​ಪ್ರಜಾವಾಣಿ ವಾರ್ತೆ
Published 7 ಜುಲೈ 2017, 7:58 IST
Last Updated 7 ಜುಲೈ 2017, 7:58 IST
ಪ್ರತಿಭಟನೆ ಹಿಂಪಡೆದ ಸಿಬ್ಬಂದಿ; ಮೆಟ್ರೊ ರೈಲು ಸಂಚಾರ ಪುನರಾರಂಭ
ಪ್ರತಿಭಟನೆ ಹಿಂಪಡೆದ ಸಿಬ್ಬಂದಿ; ಮೆಟ್ರೊ ರೈಲು ಸಂಚಾರ ಪುನರಾರಂಭ   

ಬೆಂಗಳೂರು: ಮೆಟ್ರೊ ಸಿಬ್ಬಂದಿ ಬಂಧನ ಖಂಡಿಸಿ ಶುಕ್ರವಾರ ಪ್ರತಿಭಟನೆ ನಡೆಸುತ್ತಿದ್ದ ನಮ್ಮ ಮೆಟ್ರೊ ಸಿಬ್ಬಂದಿ ಪ್ರತಿಭಟನೆಯನ್ನು ಹಿಂಪಡೆದಿದ್ದು, ರೈಲು ಸಂಚಾರ ಪುನರಾರಂಭವಾಗಿದೆ.

ಮೆಟ್ರೊ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್‌ ಸಿಂಗ್‌ ಖರೋಲಾ ಮತ್ತು ಹೆಚ್ಚುವರಿ ಪೊಲೀಸ್‌ ಕಮಿಷನರ್‌ ಹೇಮಂತ್‌ ನಿಂಬಾಳ್ಕರ್‌ ಹಾಗೂ ಕಾರ್ಮಿಕ ಸಂಘಟನೆಯ ಮುಖಂಡರು ನಮ್ಮ ಮೆಟ್ರೊ ಸಿಬ್ಬಂದಿ ಜತೆ ಸಭೆ ನಡೆಸಿದ್ದು, ಘಟನೆಯ ತನಿಖೆಗೆ ಸಮಿತಿ ರಚನೆಯ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆದಿದ್ದಾರೆ.

ಪ್ರತಿಭಟನೆ ಹಿಂಪಡೆದ ಬಳಿಕ ಮಧ್ಯಾಹ್ನ 12.30ರಿಂದ ರೈಲು ಸಂಚಾರ ಪುನರಾರಂಭವಾಗಿದೆ.

ADVERTISEMENT

ಘಟನೆ ಸಂಬಂಧ ಬಿಎಂಆರ್‌ಸಿಎಲ್‌ ಆಡಳಿತ ಮತ್ತು ಮೆಟ್ರೊ ಸಿಬ್ಬಂದಿ ಹಾಗೂ ಪೊಲೀಸ್‌ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಿ ಘಟನೆಯ ತನಿಖೆ ನಡೆಸಲಾಗುವುದು. ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಸಭೆಯಲ್ಲಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.

ಮೆಟ್ರೊ ಸಿಬ್ಬಂದಿ ಹಾಗೂ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ (ಕೆಎಸ್‌ಐಎಸ್‌ಎಫ್‌) ಪೊಲೀಸರ ನಡುವೆ ಗುರುವಾರ ಮಾರಾಮಾರಿ ನಡೆದಿದ್ದು, ಈ ಸಂಬಂಧ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನ ಖಂಡಿಸಿ ಶುಕ್ರವಾರ ನಮ್ಮ ಮೆಟ್ರೊ ಸಿಬ್ಬಂದಿ ಪ್ರತಿಭಟನೆ ಆರಂಭಿಸಿದ್ದರು. ಇದರಿಂದಾಗಿ ಬೆಳಿಗ್ಗೆಯಿಂದ ರೈಲು ಸಂಚಾರ ಸ್ಥಗಿತಗೊಂಡಿತ್ತು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.