ADVERTISEMENT

ಬರಗೂರರಿಗೆ ‘ನೃಪತುಂಗ’ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2013, 19:30 IST
Last Updated 22 ಅಕ್ಟೋಬರ್ 2013, 19:30 IST

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸ್ಥಾಪಿಸಲಾಗಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ‘ನೃಪತುಂಗ ಸಾಹಿತ್ಯ ಪ್ರಶಸ್ತಿ’ಗೆ ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪರಿಷತ್ತಿನ ಅಧ್ಯಕ್ಷ ಪುಂಡಲೀಕ ಹಾಲಂಬಿ ತಿಳಿಸಿದ್ದಾರೆ.

ಪ್ರಶಸ್ತಿಯು ಏಳು ಲಕ್ಷದ ಒಂದು ರೂಪಾಯಿ ನಗದು ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ. ಪರಿಷತ್ತಿನ ಅಧ್ಯಕ್ಷ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ವ್ಯವಸ್ಥಾಪಕ ನಿರ್ದೇಶಕ, ಸಂಸ್ಥೆಯ ಕೇಂದ್ರೀಯ ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ಹಾಗೂ ಸಾಹಿತಿಗಳನ್ನು ಒಳಗೊಂಡ ಆರು ಮಂದಿಯ ಸಮಿತಿ ಯು 2013ರ ಸಾಲಿನ ಪ್ರಶಸ್ತಿಗೆ ಬರಗೂರು ಅವರ ಹೆಸರನ್ನು ಅಂತಿಮ ಗೊಳಿಸಿತು.

ನವೆಂಬರ್‌ 12ರಂದು ನಗರದ ರವೀಂದ್ರ ಕಲಾ ಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. 2007ರಲ್ಲಿ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಉಪೇಂದ್ರ ತ್ರಿಪಾಠಿ ಅವರ ಆಸಕ್ತಿಯ ಫಲವಾಗಿ ಈ ಪ್ರಶಸ್ತಿಯನ್ನು ಸ್ಥಾಪಿಸಲಾಯಿತು. ಒಂದೂವರೆ ಕೋಟಿ ರೂಪಾಯಿಗಳ ಸ್ಥಾಯಿನಿಧಿಯಿಂದ ಬರುವ ಬಡ್ಡಿ ಹಣ ದಲ್ಲಿ ಪ್ರತಿ ವರ್ಷ  ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.