ADVERTISEMENT

ಬಸವನಪುರ ಮುಖ್ಯರಸ್ತೆಗೆ ಡಾಂಬರು ಭಾಗ್ಯ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2017, 19:54 IST
Last Updated 16 ಮಾರ್ಚ್ 2017, 19:54 IST
ಬಸವನಪುರ ಮುಖ್ಯರಸ್ತೆಗೆ ಡಾಂಬರು ಭಾಗ್ಯ
ಬಸವನಪುರ ಮುಖ್ಯರಸ್ತೆಗೆ ಡಾಂಬರು ಭಾಗ್ಯ   

ಬೆಂಗಳೂರು: ಕೆ.ಆರ್.ಪುರದ ಅಯ್ಯಪ್ಪನಗರದಿಂದ ಹಳೆ ಮದ್ರಾಸ್ ರಸ್ತೆಗೆ ಸಂಪರ್ಕ ಕಲ್ಪಿಸುವ ಬಸವನಪುರ ಮುಖ್ಯರಸ್ತೆಯ ಡಾಂಬರೀಕರಣ ಕಾಮಗಾರಿಗೆ  ಬಸವನಪುರ ವಾರ್ಡ್‌ನ ಪಾಲಿಕೆ ಸದಸ್ಯ ಜಯಪ್ರಕಾಶ್ ಗುರುವಾರ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ‘ಈ ಮಾರ್ಗದಲ್ಲಿ ಒಳಚರಂಡಿ ಕಾಮಗಾರಿ ಪೂರ್ಣಗೊಂಡಿದ್ದು, ಈಗ ₹ 1 ಕೋಟಿ ವೆಚ್ಚದಲ್ಲಿ ಡಾಂಬರು ಹಾಕಿಸಲಾಗುತ್ತಿದೆ. 70 ಲಕ್ಷಕ್ಕೂ ಅಧಿಕ ಹಣವನ್ನು ಖರ್ಚು ಮಾಡಿ ಅಡ್ಡರಸ್ತೆಗಳನ್ನು ದುರಸ್ತಿ ಮಾಡಲಾಗಿದೆ’ ಎಂದರು.

‘ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿಯಲು ರಸ್ತೆ ಪಕ್ಕದಲ್ಲಿ ಕಾಲುವೆ ನಿರ್ಮಾಣ ಹಾಗೂ ರಸ್ತೆಯ ಗುಂಡಿಗಳನ್ನು ಮುಚ್ಚುವ ಕಾರ್ಯವು ಭರದಿಂದ ಸಾಗುತ್ತಿದೆ. ಕಸ ವಿಲೇವಾರಿ ಸಮಸ್ಯೆಯನ್ನು ಬಗೆಹರಿಸಲಾಗುವುದು’ ಎಂದರು.

‘ಯಾವುದೇ ಪ್ರತಿಫಲವಿಲ್ಲದೆ ಗುತ್ತಿಗೆದಾರ ಚಲಪತಿ ಅವರು ಬಸವನಪುರ ಮುಖ್ಯರಸ್ತೆಗೆ ಹೊಂದಿಕೊಂಡಿರುವ ಎಲ್ಲ ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡುತ್ತಿದ್ದಾರೆ’ ಎಂದು ಶ್ಲಾಘಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.