ADVERTISEMENT

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಬಂಧನ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2017, 20:36 IST
Last Updated 27 ಮಾರ್ಚ್ 2017, 20:36 IST

ಬೆಂಗಳೂರು: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಚಂದ್ರ ಮೋಹನ್‌ (39) ಎಂಬುವರನ್ನು ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
‘ಸ್ಥಳೀಯ ನಿವಾಸಿ ಚಂದ್ರ ಮೋಹನ್‌ ಮಾರ್ಚ್‌ 20ರಂದು ಶಾಲೆಗೆ ಹೋಗುತ್ತಿದ್ದ 15 ವರ್ಷದ ಬಾಲಕಿಯನ್ನು ತಡೆದು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ.’

‘ಬಾಲಕಿಯ ಚೀರಾಟ ಕೇಳಿ ಸಹಾಯಕ್ಕೆ ಬಂದಿದ್ದ ಸ್ಥಳೀಯರು, ಚಂದ್ರಮೋಹನ್‌ನನ್ನು ಹಿಡಿದು ಥಳಿಸಿದ್ದರು.
ಮಾಹಿತಿ ಪಡೆದು ಸ್ಥಳಕ್ಕೆ ಹೋಗಿ ಆರೋಪಿಯನ್ನು ಬಂಧಿ ಸಿದೆವು. ಆತನ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ (ಪೋಕ್ಸೊ) ಅಡಿ ಪ್ರಕರಣ ದಾಖಲಿಸಿಕೊಂಡಿದ್ದೇವೆ’ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT