ADVERTISEMENT

ಬಿಎಂಟಿಸಿ ಬಸ್‌ ಡಿಕ್ಕಿ: ಸಾವು

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2017, 19:27 IST
Last Updated 21 ಸೆಪ್ಟೆಂಬರ್ 2017, 19:27 IST

ಬೆಂಗಳೂರು: ಐಟಿಐ ಕಾರ್ಖಾನೆ ಬಳಿಯ ಸರ್ವಿಸ್ ರಸ್ತೆಯಲ್ಲಿ ಗುರುವಾರ ಮೊಪೆಡ್‌ಗೆ ಬಿಎಂಟಿಸಿ ಬಸ್‌ ಡಿಕ್ಕಿ ಹೊಡೆದು ಮಲಯಾದ್ರಿ ಮಂಡಲಪೊ(50) ಎಂಬುವರು ಮೃತಪಟ್ಟಿದ್ದಾರೆ.

ಕಮ್ಮನಹಳ್ಳಿ ಸಮೀಪದ ರಾಮಸ್ವಾಮಿಪಾಳ್ಯ ನಿವಾಸಿಯಾದ ಅವರು, ಬೆಳಿಗ್ಗೆ 6ಗಂಟೆ ಸುಮಾರಿಗೆ ಮೊಪೆಡ್‌ನಲ್ಲಿ ಕೆಲಸಕ್ಕೆ ಹೋಗುತ್ತಿದ್ದರು. ಆಗ ಎದುರಿನಿಂದ ಬಂದ ಬಸ್‌, ಮೊಪೆಡ್‌ಗೆ ಡಿಕ್ಕಿ ಹೊಡೆಯಿತು.

ಕೆಳಗೆ ಬಿದ್ದು ತೀವ್ರ ಗಾಯಗೊಂಡ ಅವರು, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಕೊನೆಯುಸಿರೆಳೆದರು ಎಂದು ಕೆ.ಆರ್.ಪುರ ಸಂಚಾರ ಪೊಲೀಸರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.