ADVERTISEMENT

ಬಿಗಿ ಭದ್ರತೆ: ಬೆಂಗಳೂರಿನಲ್ಲಿ ನಿಷೇಧಾಜ್ಞೆ ಮುಂದುವರಿಕೆ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2016, 19:30 IST
Last Updated 26 ಸೆಪ್ಟೆಂಬರ್ 2016, 19:30 IST
ಬಿಗಿ ಭದ್ರತೆ: ಬೆಂಗಳೂರಿನಲ್ಲಿ ನಿಷೇಧಾಜ್ಞೆ ಮುಂದುವರಿಕೆ
ಬಿಗಿ ಭದ್ರತೆ: ಬೆಂಗಳೂರಿನಲ್ಲಿ ನಿಷೇಧಾಜ್ಞೆ ಮುಂದುವರಿಕೆ   

ಬೆಂಗಳೂರು: ಕಾವೇರಿ ಜಲ ವಿವಾದ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ಮಂಗಳವಾರ (ಸೆ. 27) ವಿಚಾರಣೆ ನಡೆಯಲಿದ್ದು, ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.

ನಗರದ ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಸ್ಥಳಗಳಲ್ಲಿ ಭದ್ರತೆಗೆ ಈಗಾಗಲೇ ಸಿಬ್ಬಂದಿ ನಿಯೋಜಿಸಲಾಗಿದೆ. ಜತೆಗೆ ಪ್ರಮುಖ ರಸ್ತೆ ಹಾಗೂ ಸ್ಥಳಗಳ ಮೇಲೆ ನಿಗಾ ಇರಿಸಲಾಗಿದೆ’ ಎಂದು ನಗರ ಪೊಲೀಸ್‌ ಕಮಿಷನರ್‌ ಎನ್‌.ಎಸ್‌. ಮೇಘರಿಕ್‌ ಹೇಳಿದರು.

‘ಕ್ಷಿಪ್ರ ಕಾರ್ಯಪಡೆಯ 6 ತುಕಡಿಗಳು, ಬಿಎಸ್‌ಎಫ್‌ ಹಾಗೂ ಸೀಮಾ ಸುರಕ್ಷಾ ಬಲದ ತಲಾ 3 ಕಂಪೆನಿಗಳು, ಒಂದು ಇಂಡೊ–ಟಿಬೆಟ್‌ ಬಾರ್ಡರ್‌ ಪಡೆ, ಕೆಎಸ್‌ಆರ್‌ಪಿಯ 40 ತುಕಡಿಗಳನ್ನು ಭದ್ರತೆಗೆ ಬಳಸಿಕೊಳ್ಳಲಾಗುತ್ತಿದೆ. ಜತೆಗೆ  15 ಸಾವಿರಕ್ಕೂ ಹೆಚ್ಚು ಸ್ಥಳೀಯ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ’ ಎಂದು ಹೇಳಿದರು.

ನಿಷೇಧಾಜ್ಞೆ ಮುಂದುವರಿಕೆ: ನಗರದಲ್ಲಿ ಇತ್ತೀಚೆಗೆ ನಡೆದ ಗಲಭೆ ನಿಯಂತ್ರಿಸಲು ಜಾರಿಗೊಳಿಸಿದ್ದ ನಿಷೇಧಾಜ್ಞೆಯು ಮಂಗಳವಾರ ಜಾರಿಯಲ್ಲಿರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT